ಬೆಂಗಳೂರು, ಸೆಪ್ಟೆಂಬರ್ 28: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ (Gold and silver Rates) ಇನ್ನಷ್ಟು ಮುಂದುವರಿದಿದೆ. ಭಾರತ ಮತ್ತು ವಿಶ್ವದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲೂ ಸಾಕಷ್ಟು ಕಡಿಮೆ ಆಗಿದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,420 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಒಂದು ಎಕರೆಯಲ್ಲಿ ಈ ಮರಗಳನ್ನು ನೆಟ್ಟರೆ 12 ಲಕ್ಷ ರೂ ಆದಾಯ; ನಿಮ್ಮಲ್ಲಿ ಜಮೀನಿದ್ದರೆ ಈ ಮರದ ತೋಪು ನಿರ್ಮಿಸಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ