Gold Silver Price on 29 September: ಭಾರೀ ಕುಸಿತ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2023, September 29th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 73.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 53,900 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಸೆಪ್ಟೆಂಬರ್ 29: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಯದ್ವಾತದ್ವ ಇಳಿಯುತ್ತಿದೆ. ಭಾರತ ಮತ್ತು ವಿಶ್ವದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಕುಸಿತ ಮುಂದುವರಿಯುತ್ತಿದೆ. ಬೆಳ್ಳಿ ಬೆಲೆಯಲ್ಲೂ ಸಾಕಷ್ಟು ಕಡಿಮೆ ಆಗಿದೆ. ಅಮೆರಿಕದ ಬಾಂಡ್ಗಳ ಮೇಲೆ ಹೂಡಿಕೆದಾರರ ಚಿತ್ತ ನೆಟ್ಟಿರುವುದರಿಂದ ಚಿನ್ನಕ್ಕೆ ಬೇಡಿಕೆ ಸದ್ಯದ ಮಟ್ಟಿಗೆ ಕಡಿಮೆ ಆಗಿದೆ. ಕಳೆದ 6 ತಿಂಗಳಲ್ಲೇ ಚಿನ್ನದ ಬೆಲೆ ಕನಿಷ್ಠ ಮಟ್ಟಕ್ಕೆ ಇಳಿದಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 53,900 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,370 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 53,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 29ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 737 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53,900 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,800 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 53,900 ರೂ
- ಚೆನ್ನೈ: 54,100 ರೂ
- ಮುಂಬೈ: 53,900 ರೂ
- ದೆಹಲಿ: 54,050 ರೂ
- ಕೋಲ್ಕತಾ: 54,500 ರೂ
- ಕೇರಳ: 53,900 ರೂ
- ಅಹ್ಮದಾಬಾದ್: 53,950 ರೂ
- ಜೈಪುರ್: 54,050 ರೂ
- ಲಕ್ನೋ: 54,050 ರೂ
- ಭುವನೇಶ್ವರ್: 53,900 ರೂ
ಇದನ್ನೂ ಓದಿ:
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,810 ರಿಂಗಿಟ್ (49,636 ರುಪಾಯಿ)
- ದುಬೈ: 2,102.50 ಡಿರಾಮ್ (47,619 ರುಪಾಯಿ)
- ಅಮೆರಿಕ: 580 ಡಾಲರ್ (48,234 ರುಪಾಯಿ)
- ಸಿಂಗಾಪುರ: 799 ಸಿಂಗಾಪುರ್ ಡಾಲರ್ (48,521 ರುಪಾಯಿ)
- ಕತಾರ್: 2,175 ಕತಾರಿ ರಿಯಾಲ್ (49,608 ರೂ)
- ಓಮನ್: 230 ಒಮಾನಿ ರಿಯಾಲ್ (49,683 ರುಪಾಯಿ)
- ಕುವೇತ್: 181 ಕುವೇತಿ ದಿನಾರ್ (48,680 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,300 ರೂ
- ಚೆನ್ನೈ: 7,650 ರೂ
- ಮುಂಬೈ: 7,370 ರೂ
- ದೆಹಲಿ: 7,370 ರೂ
- ಕೋಲ್ಕತಾ: 7,370 ರೂ
- ಕೇರಳ: 7,650 ರೂ
- ಅಹ್ಮದಾಬಾದ್: 7,370 ರೂ
- ಜೈಪುರ್: 7,370 ರೂ
- ಲಕ್ನೋ: 7,370 ರೂ
- ಭುವನೇಶ್ವರ್: 7,650 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ