ಬೆಂಗಳೂರು, ಸೆಪ್ಟಂಬರ್ 3: ಭಾರತದಲ್ಲಿ ಸತತವಾಗಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಮಂಗಳವಾರ ಯಥಾಸ್ಥಿತಿ ಕಾಯ್ದುಕೊಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 2 ರೂನಷ್ಟು ಕಡಿಮೆ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಇದು ಬಿಟ್ಟರೆ ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಭಾರತದ ಜಿಡಿಪಿಗಿಂತ ಹೆಚ್ಚಿದೆ ಷೇರುಮಾರುಕಟ್ಟೆ ಬಂಡವಾಳ; ಇದು ಆತಂಕಕಾರಿ ಸಂಗತಿಯಾ? ಸಿಇಒ ಎಚ್ಚರಿಕೆಯ ಮಾತುಗಳಿವು
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ