ಬೆಂಗಳೂರು, ಸೆಪ್ಟೆಂಬರ್ 4: ಚಿನ್ನದ ಬೆಲೆ (Gold Rates) ದುಬೈ ಮೊದಲಾದ ಕೆಲವೆಡೆ ತುಸು ಕಡಿಮೆ ಆಗಿದೆ. ಆದರೆ, ಭಾರತದಲ್ಲಿ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಎಲ್ಲೆಡೆ ತಗ್ಗಿದೆ. ಇದು ತಾತ್ಕಾಲಿಕ ಬೆಳವಣಿಗೆ ಎನ್ನಲಾಗುತ್ತಿದ್ದು, ಈ ವಾರ ಎರಡೂ ಲೋಹಗಳ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,630 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ನಿಮಗೆ ಸಂಪಾದನೆ ಎಷ್ಟೇ ಇರಲಿ, ಹಣ ನಿರ್ವಹಣೆಗೆ ನೆನಪಿರಲಿ 3 ಬಕೆಟ್ ಫಾರ್ಮುಲಾ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ