ಬೆಂಗಳೂರು, ಸೆಪ್ಟಂಬರ್ 4: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ ಕಂಡಿವೆ. ಕಳೆದ ಹತ್ತು ದಿನದಲ್ಲಿ ಬೆಳ್ಳಿ ಬೆಲೆ ಹೆಚ್ಚೂಕಡಿಮೆ ಗ್ರಾಮ್ಗೆ 3 ರೂನಷ್ಟು ಕಡಿಮೆ ಆಗಿದೆ. ಕಳೆದ ಒಂದು ವಾರದಲ್ಲಿ ಮೂರೂವರೆ ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಒಂದು ವಾರದಲ್ಲಿ ಗ್ರಾಮ್ಗೆ 50 ರೂನಷ್ಟು ಇಳಿಕೆ ಆಗಿದೆ. ಇಂದು ಬುಧವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂನಷ್ಟು ತಗ್ಗಿದೆ. ವಿದೇಶಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,690 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,690 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 04: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ