AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 06 September: ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ ಇಳಿಕೆ; ಇವತ್ತಿನ ದರಪಟ್ಟಿ ಇಲ್ಲಿದೆ

Bullion Market 2023, September 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.20 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 06 September: ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ ಇಳಿಕೆ; ಇವತ್ತಿನ ದರಪಟ್ಟಿ ಇಲ್ಲಿದೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 06, 2023 | 5:04 AM

Share

ಬೆಂಗಳೂರು, ಸೆಪ್ಟೆಂಬರ್ 6: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಎರಡೂ ಇಳಿಕೆ ಕಂಡಿವೆ. ಅಮೆರಿಕದ ಆರ್ಥಿಕ ಪರಿಸ್ಥಿತಿ, ಡಾಲರ್ ಬಲ, ಬಡ್ಡಿದರ ಇತ್ಯಾದಿ ಅಂಶಗಳಲ್ಲಿ ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಬಡ್ಡಿದರ ಸಾಕಷ್ಟು ಎತ್ತರದಲ್ಲಿ ಮುಂದುವರಿಯುತ್ತಿರುವುದರಿಂದ ಚಿನ್ನಕ್ಕೆ ಮುಗಿಬೀಳುವವರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ, ಇದು ತಾತ್ಕಾಲಿಕ ಮಾತ್ರ ಇರಬಹುದು. ಹಣದುಬ್ಬರ ಇಳಿಕೆಯಾದರೆ ಅಮೆರಿಕದ ಸೆಂಟ್ರಲ್ ಬ್ಯಾಂಕ್ ಬಡ್ಡಿ ದರ ಇಳಿಸಿದರೆ ಜನರು ಚಿನ್ನವನ್ನು ಅಪ್ಪುವ ಸಾಧ್ಯತೆ ಹೆಚ್ಚು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,150 ರೂ
  • ಚೆನ್ನೈ: 55,450 ರೂ
  • ಮುಂಬೈ: 55,150 ರೂ
  • ದೆಹಲಿ: 55,300 ರೂ
  • ಕೋಲ್ಕತಾ: 55,150 ರೂ
  • ಕೇರಳ: 55,150 ರೂ
  • ಅಹ್ಮದಾಬಾದ್: 55,200 ರೂ
  • ಜೈಪುರ್: 55,300 ರೂ
  • ಲಕ್ನೋ: 55,300 ರೂ
  • ಭುವನೇಶ್ವರ್: 55,150 ರೂ

ಇದನ್ನೂ ಓದಿ: Arecanut Price 5 Sep: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಮತ್ತು ಕೋಕೋ ಬೆಲೆ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,110 ರುಪಾಯಿ)
  • ದುಬೈ: 2165 ಡಿರಾಮ್ (48,940 ರುಪಾಯಿ)
  • ಅಮೆರಿಕ: 595 ಡಾಲರ್ (49,403 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,806 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (51,012 ರೂ)
  • ಓಮನ್: 237 ಒಮಾನಿ ರಿಯಾಲ್ (51,179 ರುಪಾಯಿ)
  • ಕುವೇತ್: 186.50 ಕುವೇತಿ ದಿನಾರ್ (50,191 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,900 ರೂ
  • ಮುಂಬೈ: 7,520 ರೂ
  • ದೆಹಲಿ: 7,520 ರೂ
  • ಕೋಲ್ಕತಾ: 7,520 ರೂ
  • ಕೇರಳ: 7,900 ರೂ
  • ಅಹ್ಮದಾಬಾದ್: 7,520 ರೂ
  • ಜೈಪುರ್: 7,520 ರೂ
  • ಲಕ್ನೋ: 7,520 ರೂ
  • ಭುವನೇಶ್ವರ್: 7,900 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ