Gold Silver Price on 07 September: ಚಿನ್ನ, ಬೆಳ್ಳಿ ಬೆಲೆ ಇಳಿಕೆ ಮುಂದುವರಿಕೆ; ಗ್ರಾಂಗೆ 15 ರೂ ಇಳಿದ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಪಟ್ಟಿ
Bullion Market 2023, September 7th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 74.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 55,000 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,375 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆಪ್ಟೆಂಬರ್ 7: ದೇಶ ಮತ್ತು ವಿದೇಶಗಳಲ್ಲಿ ಹಲವೆಡೆ ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಗಳ (Gold and Silver Rates) ಇಳಿಕೆ ಮುಂದುವರಿದಿದೆ. ಭಾರತದಲ್ಲಿ ಚಿನ್ನ ಗ್ರಾಂಗೆ 15 ರೂನಷ್ಟು ಇಳಿಕೆಯಾಗಿದೆ. ಅಮೆರಿಕದಲ್ಲಿನ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆಯು (Economic Uncertainty) ಹೂಡಿಕೆದಾರರನ್ನು ಗೊಂದಲಕ್ಕೆ ಕೆಡವಿದೆ. ಈ ಬೆಲೆ ಇಳಿಕೆ ತಾತ್ಕಾಲಿಕ ಮಾತ್ರ ಇರಬಹುದು ಎಂದು ಹೇಳಲಾಗುತ್ತಿದೆ. ಹಣದುಬ್ಬರ ಇಳಿಕೆಯಾದರೆ ಅಮೆರಿಕದ ಸೆಂಟ್ರಲ್ ಬ್ಯಾಂಕ್ ಬಡ್ಡಿ ದರ ಇಳಿಸಿದರೆ ಜನರು ಚಿನ್ನವನ್ನು ಅಪ್ಪುವ ಸಾಧ್ಯತೆ ಹೆಚ್ಚು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,470 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,375 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 7ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 747 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 737.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 55,000 ರೂ
- ಚೆನ್ನೈ: 55,300 ರೂ
- ಮುಂಬೈ: 55,000 ರೂ
- ದೆಹಲಿ: 55,150 ರೂ
- ಕೋಲ್ಕತಾ: 55,000 ರೂ
- ಕೇರಳ: 55,000 ರೂ
- ಅಹ್ಮದಾಬಾದ್: 55,050 ರೂ
- ಜೈಪುರ್: 55,150 ರೂ
- ಲಕ್ನೋ: 55,150 ರೂ
- ಭುವನೇಶ್ವರ್: 55,000 ರೂ
ಇದನ್ನೂ ಓದಿ: ಸರ್ಕಾರಿ ನೌಕರರು ಷೇರು ವಹಿವಾಟು ನಡೆಸಬಹುದೇ? ನಿಯಮಗಳು ಏನು ಹೇಳುತ್ತವೆ?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,870 ರಿಂಗಿಟ್ (51,044 ರುಪಾಯಿ)
- ದುಬೈ: 2157.50 ಡಿರಾಮ್ (48,831 ರುಪಾಯಿ)
- ಅಮೆರಿಕ: 590 ಡಾಲರ್ (49,046 ರುಪಾಯಿ)
- ಸಿಂಗಾಪುರ: 816 ಸಿಂಗಾಪುರ್ ಡಾಲರ್ (49,828 ರುಪಾಯಿ)
- ಕತಾರ್: 2,230 ಕತಾರಿ ರಿಯಾಲ್ (50,849 ರೂ)
- ಓಮನ್: 235.50 ಒಮಾನಿ ರಿಯಾಲ್ (50,916 ರುಪಾಯಿ)
- ಕುವೇತ್: 185.50 ಕುವೇತಿ ದಿನಾರ್ (49,988 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,375 ರೂ
- ಚೆನ್ನೈ: 7,850 ರೂ
- ಮುಂಬೈ: 7,470 ರೂ
- ದೆಹಲಿ: 7,470 ರೂ
- ಕೋಲ್ಕತಾ: 7,470 ರೂ
- ಕೇರಳ: 7,850 ರೂ
- ಅಹ್ಮದಾಬಾದ್: 7,470 ರೂ
- ಜೈಪುರ್: 7,470 ರೂ
- ಲಕ್ನೋ: 7,470 ರೂ
- ಭುವನೇಶ್ವರ್: 7,850 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Thu, 7 September 23