ಬೆಂಗಳೂರು, ಸೆಪ್ಟಂಬರ್ 9: ಕಳೆದ ಎರಡು ವಾರಗಳಿಂದ ಏರಿಕೆಗಿಂತ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಉಳಿದ ಕಡೆಯೂ ಯಥಾಸ್ಥಿತಿ ಇದೆ. ಆದರೆ, ಎಲ್ಲೂ ದರ ಏರಿಕೆ ಆಗಿಲ್ಲ. ಬೆಳ್ಳಿ ಬೆಲೆ ಮಾತ್ರ ಬಹುತೇಕ ಕಡೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ 50 ಪೈಸೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 84 ರೂ ಇದ್ದದ್ದು 83.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,350 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ