ಬೆಂಗಳೂರು: ಕಳೆದ ಹಲವು ದಿನಗಳಿಂದ ಏರಿಳಿಕೆಯ ಅನಿಶ್ಚಿತತೆಯಲ್ಲಿರುವ ಚಿನ್ನದ ಬೆಲೆ (Gold Rates Hike) ಇದೀಗ ದಿಢೀರ್ 500 ರುಪಾಯಿಯಷ್ಟು ಏರಿಕೆ ಕಂಡಿದೆ. ನಿನ್ನೆ ಇಳಿಕೆಯಾಗಿದ್ದ ಚಿನ್ನಕ್ಕೆ ಮತ್ತೆ ಬೇಡಿಕೆ ಶುರುವಾಗಿದೆ. ಮುಂದಿನ ದಿನಗಳೂ ಬೆಲೆಗಳಲ್ಲಿ ಕ್ಷಿಪ್ರ ವ್ಯತ್ಯಯಗಳಾಗುವ ಸಾಧ್ಯತೆ ಇದೆ. ಇದೀಗ ಭಾರತದಲ್ಲಿ 10 ಗ್ರಾಮ್ ಚಿನ್ನದ ಬೆಲೆ 53,550 ರುಪಾಯಿ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 58,420 ರುಪಾಯಿ ಆಗಿದೆ. ಬೆಳ್ಳಿ ಬೆಲೆ 100 ಗ್ರಾಮ್ಗೆ 20 ರುಪಾಯಿಯಷ್ಟು ಏರಿಕೆ ಆಗಿದೆ. ನಿನ್ನೆ 50 ರೂನಷ್ಟು ಬೆಲೆ ಹೆಚ್ಚಿಸಿಕೊಂಡಿತ್ತು ಬೆಳ್ಳಿ ಲೋಹ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 53,600 ರುಪಾಯಿ ಆದರೆ, 100 ಗ್ರಾಮ್ ಬೆಳ್ಳಿ ಬೆಲೆ 7,270 ರುಪಾಯಿಗೆ ಏರಿಕೆಯಾಗಿದೆ.
ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಭಾರತಕ್ಕೆ ಹೋಲಿಸಿದರೆ ಕಡಿಮೆ ಇದೆ. ಯುಎಇಯ ಭಾಗವಾಗಿರುವ ದುಬೈ, ಅಬುಧಾಬಿ ಮತ್ತು ಶಾರ್ಜಾ ನಗರಗಳಲ್ಲಿ ಬೆಲೆ ಸ್ವಲ್ಪ ಕಡಿಮೆ ಆಗಿದೆ. ಮಲೇಷ್ಯಾ ಮತ್ತು ಓಮನ್ ದೇಶಗಳಲ್ಲಿ ಚಿನ್ನದ ಬೆಲೆ 50 ಸಾವಿರ ರೂ ಗಡಿ ದಾಟಿದೆ. ಕತಾರ್, ಕುವೇತ್ ದೇಶಗಳಲ್ಲಿ 50 ಸಾವಿರ ಗಡಿ ಸಮೀಪ ಬೆಲೆ ಹೋಗುತ್ತಿದೆ.
ಅಮೆರಿಕದ ಆರ್ಥಿಕತೆಯ ತುಮುಲ, ನಿರುದ್ಯೋಗ ಅಂಕಿ ಅಂಶದ ಗೊಂದಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಚಿನ್ನದತ್ತ ಗಮನ ಕೊಡುವಂತೆ ಮಾಡಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚಿ ಬೆಲೆ ಕೂಡ ಹೆಚ್ಚುತ್ತಿದೆ. ತಜ್ಞರ ಪ್ರಕಾರ ಇನ್ನೂ ಬಹಳಷ್ಟು ದಿನ ಚಿನ್ನದ ಬೆಲೆ ಏರಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಈಗಲೂ ಪ್ರಶಸ್ತ ಸಮಯ ಇದೆ ಎಂಬ ಸಲಹೆಯನ್ನು ಕೊಡಲಾಗಿದೆ.
ಇದನ್ನೂ ಓದಿ: Areca Nut Price: ಇಂದಿನ ಅಡಿಕೆ ಮಾರುಕಟ್ಟೆ ಧಾರಣೆ: ಎಲ್ಲೆಲ್ಲಿ ಅಡಿಕೆ ಧಾರಣೆ ಎಷ್ಟಿದೆ: ಇಲ್ಲಿದೆ ಮಾಹಿತಿ
ಭಾರತದಲ್ಲಿರುವ ಬೆಲೆ (ಮಾರ್ಚ್ 17ಕ್ಕೆ):
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53,550 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,420 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 692 ರೂ
ಬೆಂಗಳೂರಿನಲ್ಲಿರುವ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 53,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,470 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 727 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಇದನ್ನೂ ಓದಿ: Innovation: ಇನ್ನೋವೇಶನ್ ಇಂಡೆಕ್ಸ್ನಲ್ಲಿ ಭಾರತ ಹೈಜಂಪ್; ಕ್ರಿಯಾಶೀಲತೆಯ ವಾತಾವರಣ ಇರುವ ಟಾಪ್ 10 ಕಂಪನಿಗಳಿವು
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (10 ಗ್ರಾಮ್ಗೆ)