Gold Rate: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Gold Price 01 July 2026: ನಿನ್ನೆ ಕುಸಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳೆರಡೂ ಬುಧವಾರ ಹೆಚ್ಚಳವಾಗಿವೆ. 22 ಕ್ಯಾರಟ್ ಚಿನ್ನದ ಬೆಲೆ 12,845 ರೂನಿಂದ 12,905 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,078 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rate: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Image Credit source: PTI

Updated on: Jul 01, 2026 | 12:26 PM

ಮುಖ್ಯಾಂಶಗಳು

  • ನಿನ್ನೆ ಕುಸಿತ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳೆರಡೂ ಬುಧವಾರ ಹೆಚ್ಚಳವಾಗಿವೆ.
  • 22 ಕ್ಯಾರಟ್ ಚಿನ್ನದ ಬೆಲೆ 12,845 ರೂ, 24 ಕ್ಯಾರಟ್ ಚಿನ್ನದ ಬೆಲೆ 14,078 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ.

ನವದೆಹಲಿ, ಜುಲೈ 1: ನಿನ್ನೆ ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಇವತ್ತು ಸ್ವಲ್ಪ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆಯೂ ನಿನ್ನೆ ಐದು ರೂ ಕಡಿಮೆಗೊಂಡಿದ್ದು, ಇವತ್ತು ಅಷ್ಟೇ ಮೊತ್ತ ಹೆಚ್ಚಿದೆ. ಬಂಗಾರದ ದರ ಬುಧವಾರ ಗ್ರಾಮ್​ಗೆ 60 ರೂನಷ್ಟು ಏರಿದೆ. ಇದರೊಂದಿಗೆ ಆಭರಣ ಚಿನ್ನದ ಬೆಲೆ 12,900 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಈ ಹಳದಿ ಲೋಹದ ದರ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,29,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,40,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,29,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,078 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,905 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,559 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,078 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,905 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,905 ರೂ
  • ಚೆನ್ನೈ: 13,100 ರೂ
  • ಮುಂಬೈ: 12,905 ರೂ
  • ದೆಹಲಿ: 12,920 ರೂ
  • ಕೋಲ್ಕತಾ: 12,905 ರೂ
  • ಕೇರಳ: 12,905 ರೂ
  • ಅಹ್ಮದಾಬಾದ್: 12,910 ರೂ
  • ಜೈಪುರ್: 12,920 ರೂ
  • ಲಕ್ನೋ: 12,920 ರೂ
  • ಭುವನೇಶ್ವರ್: 12,905 ರೂ

ಇದನ್ನೂ ಓದಿ: ನಯಾರದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಭರ್ಜರಿ ಇಳಿಕೆ; ವಿಮಾನ ಇಂಧನವೂ ಅಗ್ಗ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 537 ರಿಂಗಿಟ್ (12,422 ರುಪಾಯಿ)
  • ದುಬೈ: 485.25 ಡಿರಾಮ್ (12,515 ರುಪಾಯಿ)
  • ಅಮೆರಿಕ: 133 ಡಾಲರ್ (12,600 ರುಪಾಯಿ)
  • ಸಿಂಗಾಪುರ: 176.10 ಸಿಂಗಾಪುರ್ ಡಾಲರ್ (12,874 ರುಪಾಯಿ)
  • ಕತಾರ್: 488 ಕತಾರಿ ರಿಯಾಲ್ (12,684 ರೂ)
  • ಸೌದಿ ಅರೇಬಿಯಾ: 502 ಸೌದಿ ರಿಯಾಲ್ (12,658 ರುಪಾಯಿ)
  • ಓಮನ್: 51.80 ಒಮಾನಿ ರಿಯಾಲ್ (12,746 ರುಪಾಯಿ)
  • ಕುವೇತ್: 40.78 ಕುವೇತಿ ದಿನಾರ್ (12,547 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us