AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 245 ಏರಿಕೆ; ಬೆಳ್ಳಿ ಬೆಲೆ 5 ರೂ ಹೆಚ್ಚಳ

Gold Price 02 July 2026: ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆಗಳು ಗುರುವಾರವೂ ಏರಿವೆ. ಚಿನ್ನದ ಬೆಲೆ ಗ್ರಾಮ್​ಗೆ 245 ರೂ ಏರಿದೆ. ಆಭರಣ ಚಿನ್ನದ ಬೆಲೆ 12,905 ರೂನಿಂದ 13,250 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,455 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 245 ಏರಿಕೆ; ಬೆಳ್ಳಿ ಬೆಲೆ 5 ರೂ ಹೆಚ್ಚಳ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 02, 2026 | 11:30 AM

Share

ಮುಖ್ಯಾಂಶಗಳು

  • ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆಗಳು ಗುರುವಾರವೂ ಏರಿವೆ. ಚಿನ್ನದ ಬೆಲೆ ಗ್ರಾಮ್​ಗೆ 245 ರೂ ಏರಿದೆ.
  • ಆಭರಣ ಚಿನ್ನದ ಬೆಲೆ 12,905 ರೂನಿಂದ 13,250 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಜುಲೈ 2: ಚಿನ್ನ ಮತ್ತು ಬೆಳ್ಳಿ ಬೆಲೆಗಳು ನಿನ್ನೆಯಂತೆ ಇವತ್ತೂ ಹೆಚ್ಚಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ 245 ರೂ ಏರಿದರೆ, ಬೆಳ್ಳಿ ಬೆಲೆ 5 ರೂ ದುಬಾರಿಗೊಂಡಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 2ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,455 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,841 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,445 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,250 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,250 ರೂ
  • ಚೆನ್ನೈ: 13,400 ರೂ
  • ಮುಂಬೈ: 13,250 ರೂ
  • ದೆಹಲಿ: 13,265 ರೂ
  • ಕೋಲ್ಕತಾ: 13,250 ರೂ
  • ಕೇರಳ: 13,250 ರೂ
  • ಅಹ್ಮದಾಬಾದ್: 13,255 ರೂ
  • ಜೈಪುರ್: 13,265 ರೂ
  • ಲಕ್ನೋ: 13,265 ರೂ
  • ಭುವನೇಶ್ವರ್: 13,250 ರೂ

ಇದನ್ನೂ ಓದಿ: ಜೂನ್ ತಿಂಗಳ ಜಿಎಸ್​ಟಿ ಸಂಗ್ರಹ ಶೇ. 14ರಷ್ಟು ಹೆಚ್ಚಳ; ಅತಿಹೆಚ್ಚು ತೆರಿಗೆ ಕಲೆಕ್ಷನ್​ನಲ್ಲಿ ಕರ್ನಾಟಕ ನಂ. 2

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 547 ರಿಂಗಿಟ್ (12,718 ರುಪಾಯಿ)
  • ದುಬೈ: 493.50 ಡಿರಾಮ್ (12,760 ರುಪಾಯಿ)
  • ಅಮೆರಿಕ: 135 ಡಾಲರ್ (12,863 ರುಪಾಯಿ)
  • ಸಿಂಗಾಪುರ: 179.80 ಸಿಂಗಾಪುರ್ ಡಾಲರ್ (13,189 ರುಪಾಯಿ)
  • ಕತಾರ್: 495 ಕತಾರಿ ರಿಯಾಲ್ (12,847 ರೂ)
  • ಸೌದಿ ಅರೇಬಿಯಾ: 508 ಸೌದಿ ರಿಯಾಲ್ (12,848 ರುಪಾಯಿ)
  • ಓಮನ್: 52.40 ಒಮಾನಿ ರಿಯಾಲ್ (12,927 ರುಪಾಯಿ)
  • ಕುವೇತ್: 40.87 ಕುವೇತಿ ದಿನಾರ್ (12,607 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Thu, 2 July 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More