AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ 25 ರೂ ಇಳಿಕೆ; 13,450 ರೂಗೆ ಇಳಿದ ಆಭರಣ ಚಿನ್ನದ ಬೆಲೆ

Gold Price 05 July 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಇಳಿದರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 13,475 ರೂನಿಂದ 13,450 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,673 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rate: ಚಿನ್ನದ ಬೆಲೆ 25 ರೂ ಇಳಿಕೆ; 13,450 ರೂಗೆ ಇಳಿದ ಆಭರಣ ಚಿನ್ನದ ಬೆಲೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 05, 2026 | 11:28 AM

Share

ಮುಖ್ಯಾಂಶಗಳು

  • ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಇಳಿದರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ.
  • ಆಭರಣ ಚಿನ್ನದ ಬೆಲೆ 13,475 ರೂನಿಂದ 13,450 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ.

ನವದೆಹಲಿ, ಜುಲೈ 5: ಈ ವಾರ ಸಖತ್ ಏರಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ತುಸು ಶಾಂತಗೊಂಡಿದೆ. ಗ್ರಾಮ್​ಗೆ 25 ರೂ ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆಯಲ್ಲಿ ಅಲ್ಪ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,34,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,673 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,450 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,005 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,673 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,450 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,450 ರೂ
  • ಚೆನ್ನೈ: 13,700 ರೂ
  • ಮುಂಬೈ: 13,450 ರೂ
  • ದೆಹಲಿ: 13,465 ರೂ
  • ಕೋಲ್ಕತಾ: 13,450 ರೂ
  • ಕೇರಳ: 13,450 ರೂ
  • ಅಹ್ಮದಾಬಾದ್: 13,455 ರೂ
  • ಜೈಪುರ್: 13,465 ರೂ
  • ಲಕ್ನೋ: 13,465 ರೂ
  • ಭುವನೇಶ್ವರ್: 13,450 ರೂ

ಇದನ್ನೂ ಓದಿ: ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕ: ಜುಲೈನಲ್ಲಿ 80ನೇ ಸ್ಥಾನಕ್ಕೆ ಕುಸಿದ ಭಾರತ; 56 ದೇಶಗಳಿಗೆ ವೀಸಾ ರಹಿತ ಪ್ರವೇಶ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 562 ರಿಂಗಿಟ್ (13,142 ರುಪಾಯಿ)
  • ದುಬೈ: 501.75 ಡಿರಾಮ್ (13,009 ರುಪಾಯಿ)
  • ಅಮೆರಿಕ: 137.50 ಡಾಲರ್ (13,093 ರುಪಾಯಿ)
  • ಸಿಂಗಾಪುರ: 183.80 ಸಿಂಗಾಪುರ್ ಡಾಲರ್ (13,551 ರುಪಾಯಿ)
  • ಕತಾರ್: 503.50 ಕತಾರಿ ರಿಯಾಲ್ (13,152 ರೂ)
  • ಸೌದಿ ಅರೇಬಿಯಾ: 518 ಸೌದಿ ರಿಯಾಲ್ (13,138 ರುಪಾಯಿ)
  • ಓಮನ್: 53.40 ಒಮಾನಿ ರಿಯಾಲ್ (13,209 ರುಪಾಯಿ)
  • ಕುವೇತ್: 42.14 ಕುವೇತಿ ದಿನಾರ್ (12,996 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:25 am, Sun, 5 July 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ