AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಬಂಗಾರದ ದರ 4 ದಿನದಲ್ಲಿ 240 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 08 July 2026: ಚಿನ್ನದ ಬೆಲೆ ಸತತವಾಗಿ ಇಳಿಯುವುದು ಮುಂದುವರಿದಿದೆ. ಬುಧವಾರ ಇದರ ಬೆಲೆ ಗ್ರಾಮ್​ಗೆ 70 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 13,245 ರೂಗೆ ಇಳಿದರೆ, ಅಪರಂಜಿ ಚಿನ್ನದ ಬೆಲೆ 14,449 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rate: ಬಂಗಾರದ ದರ 4 ದಿನದಲ್ಲಿ 240 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 08, 2026 | 11:05 AM

Share

ಮುಖ್ಯಾಂಶಗಳು

  • ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಕಡಿಮೆಗೊಂಡಿದೆ.
  • ಆಭರಣ ಚಿನ್ನದ ಬೆಲೆ 13,245 ರೂ, ಅಪರಂಜಿ ಚಿನ್ನ 14,449 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಜುಲೈ 8: ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಇಳಿಕೆ ಕಾಣುತ್ತಿದೆ. ಇವತ್ತು ಗ್ರಾಮ್​ಗೆ 70 ರೂ ಕಡಿಮೆ ಆಗಿದೆ. ನಾಲ್ಕು ದಿನದಲ್ಲಿ ಇದರ ಬೆಲೆ ಒಂದು ಗ್ರಾಮ್​ಗೆ 240 ರೂ ತಗ್ಗಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಮುಖಗೊಂಡಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರ ಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,449 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,245 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,837 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,449 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,245 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,245 ರೂ
  • ಚೆನ್ನೈ: 13,330 ರೂ
  • ಮುಂಬೈ: 13,245 ರೂ
  • ದೆಹಲಿ: 13,260 ರೂ
  • ಕೋಲ್ಕತಾ: 13,245 ರೂ
  • ಕೇರಳ: 13,245 ರೂ
  • ಅಹ್ಮದಾಬಾದ್: 13,250 ರೂ
  • ಜೈಪುರ್: 13,260 ರೂ
  • ಲಕ್ನೋ: 13,260 ರೂ
  • ಭುವನೇಶ್ವರ್: 13,245 ರೂ

ಇದನ್ನೂ ಓದಿ: ಜೂನ್​ನಲ್ಲಿ ಆಟೊಮೊಬೈಲ್ ಕ್ಷೇತ್ರಕ್ಕೆ ಸುಗ್ಗಿ; 25 ಲಕ್ಷಕ್ಕೂ ಅಧಿಕ ವಾಹನಗಳ ದಾಖಲೆ ಮಾರಾಟ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 552 ರಿಂಗಿಟ್ (12,878 ರುಪಾಯಿ)
  • ದುಬೈ: 500.75 ಡಿರಾಮ್ (12,972 ರುಪಾಯಿ)
  • ಅಮೆರಿಕ: 136.50 ಡಾಲರ್ (12,990 ರುಪಾಯಿ)
  • ಸಿಂಗಾಪುರ: 182.40 ಸಿಂಗಾಪುರ್ ಡಾಲರ್ (13,427 ರುಪಾಯಿ)
  • ಕತಾರ್: 501 ಕತಾರಿ ರಿಯಾಲ್ (13,079 ರೂ)
  • ಸೌದಿ ಅರೇಬಿಯಾ: 518 ಸೌದಿ ರಿಯಾಲ್ (13,129 ರುಪಾಯಿ)
  • ಓಮನ್: 53.35 ಒಮಾನಿ ರಿಯಾಲ್ (13,187 ರುಪಾಯಿ)
  • ಕುವೇತ್: 41.84 ಕುವೇತಿ ದಿನಾರ್ (12,942 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:58 am, Wed, 8 July 26

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ