AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 1 October: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆ 235 ರೂಗೆ ಕುಸಿತ

Gold Price 1 October 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ತಗ್ಗಿವೆ. ಚಿನ್ನ 30 ರೂ, ಬೆಳ್ಳಿ 5 ರೂ ಬೆಲೆ ಇಳಿಕೆ ಕಂಡಿವೆ. ಆಭರಣ ಚಿನ್ನದ ಬೆಲೆ 13,710 ರೂನಿಂದ 13,680 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,924 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 1 October: ಚಿನ್ನದ ಬೆಲೆ ಸತತ ಇಳಿಕೆ; ಬೆಳ್ಳಿ ಬೆಲೆ 235 ರೂಗೆ ಕುಸಿತ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 01, 2026 | 11:14 AM

Share

ನವದೆಹಲಿ, ಅಕ್ಟೋಬರ್ 1: ಚಿನ್ನದ ಬೆಲೆ ಮತ್ತೆ ಇಳಿಕೆ ಹಾದಿಗೆ ಮರಳಿದೆ. ನಿನ್ನೆ 70 ರೂ ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 30 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಐದು ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಅಲ್ಪಸ್ವಲ್ಪ ವ್ಯತ್ಯಯಗಳಾಗಿವೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,924
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,680
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,193
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,680 ರೂ
  • ಚೆನ್ನೈ: 13,680 ರೂ
  • ಮುಂಬೈ: 13,680 ರೂ
  • ದೆಹಲಿ: 13,695
  • ಕೋಲ್ಕತಾ: 13,680 ರೂ
  • ಕೇರಳ: 13,680 ರೂ
  • ಅಹ್ಮದಾಬಾದ್: 13,685 ರೂ
  • ಜೈಪುರ್: 13,695
  • ಲಕ್ನೋ: 13,695
  • ಭುವನೇಶ್ವರ್: 13,680 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134. 51 ಡಾಲರ್ (12,910 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.969 ಡಾಲರ್ (189 ರುಪಾಯಿ)

ಇದನ್ನೂ ಓದಿ: LPG Cylinder Price Hike: ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಹೆಚ್ಚಿದ ಹೊರೆ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಹೆಚ್ಚಳ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,924 ರುಪಾಯಿ
  • ಮಲೇಷ್ಯಾ: 560 ರಿಂಗಿಟ್ (13,155 ರುಪಾಯಿ)
  • ದುಬೈ: 503.50 ಡಿರಾಮ್ (13,156 ರುಪಾಯಿ)
  • ಅಮೆರಿಕ: 137 ಡಾಲರ್ (13,149 ರುಪಾಯಿ)
  • ಸಿಂಗಾಪುರ: 182.60 ಸಿಂಗಾಪುರ್ ಡಾಲರ್ (13,616 ರುಪಾಯಿ)
  • ಕತಾರ್: 503.50 ಕತಾರಿ ರಿಯಾಲ್ (13,257 ರೂ)
  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,215 ರುಪಾಯಿ)
  • ಓಮನ್: 53.20 ಒಮಾನಿ ರಿಯಾಲ್ (13,262 ರುಪಾಯಿ)
  • ಕುವೇತ್: 41.98 ಕುವೇತಿ ದಿನಾರ್ (13,088 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More