AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 10 Aug: ಕಳೆದ ವಾರ ಭರ್ಜರಿ ಏರಿದ್ದ ಚಿನ್ನದ ಬೆಲೆ ಇವತ್ತು ಇಳಿಕೆ

Gold Price 10 August 2026: ಚಿನ್ನದ ಬೆಲೆ ಇಂದು ತುಸು ಕಡಿಮೆಗೊಂಡರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಬಂಗಾರದ ದರ ಗ್ರಾಮ್​ಗೆ 35 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,965 ರೂನಿಂದ 13,930 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,197 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 10 Aug: ಕಳೆದ ವಾರ ಭರ್ಜರಿ ಏರಿದ್ದ ಚಿನ್ನದ ಬೆಲೆ ಇವತ್ತು ಇಳಿಕೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 10, 2026 | 11:55 AM

Share

ಮುಖ್ಯಾಂಶಗಳು

  • ಬಂಗಾರದ ದರ ಗ್ರಾಮ್​ಗೆ 35 ರೂ ತಗ್ಗಿದೆ.
  • ಆಭರಣ ಚಿನ್ನದ ಬೆಲೆ 13,965 ರೂನಿಂದ 13,930 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಆಗಸ್ಟ್ 10: ಕಳೆದ ವಾರ ಒಂದು ಗ್ರಾಮ್​ಗೆ ಬರೋಬ್ಬರಿ 765 ರೂ ಏರಿದ್ದ ಚಿನ್ನದ ಬೆಲೆ (Gold Price) ಇವತ್ತು ಸೋಮವಾರ 35 ರೂಗಳಷ್ಟು ಅಲ್ಪ ಇಳಿಕೆ ಕಂಡಿದೆ. ಹಲವು ದೇಶಗಳಲ್ಲೂ ಬಂಗಾರದ ದರ ತುಸು ತಗ್ಗಿದೆ. ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,197 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,930 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,398 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,197 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,930 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,930 ರೂ
  • ಚೆನ್ನೈ: 13,930 ರೂ
  • ಮುಂಬೈ: 13,930 ರೂ
  • ದೆಹಲಿ: 13,945 ರೂ
  • ಕೋಲ್ಕತಾ: 13,930 ರೂ
  • ಕೇರಳ: 13,930 ರೂ
  • ಅಹ್ಮದಾಬಾದ್: 13,935 ರೂ
  • ಜೈಪುರ್: 13,945 ರೂ
  • ಲಕ್ನೋ: 13,945 ರೂ
  • ಭುವನೇಶ್ವರ್: 13,930 ರೂ

ಇದನ್ನೂ ಓದಿ: ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಈ ದಾಖಲೆಗಳು ನಿಮ್ಮ ಬಳಿ ಇರಲಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,197 ರುಪಾಯಿ
  • ಮಲೇಷ್ಯಾ: 583 ರಿಂಗಿಟ್ (13,557 ರುಪಾಯಿ)
  • ದುಬೈ: 523.25 ಡಿರಾಮ್ (13,567 ರುಪಾಯಿ)
  • ಅಮೆರಿಕ: 142.50 ಡಾಲರ್ (13,570 ರುಪಾಯಿ)
  • ಸಿಂಗಾಪುರ: 188.90 ಸಿಂಗಾಪುರ್ ಡಾಲರ್ (14,009 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,688 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,695 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,740 ರುಪಾಯಿ)
  • ಕುವೇತ್: 43.57 ಕುವೇತಿ ದಿನಾರ್ (13,510 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Mon, 10 August 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ