Gold Rate: ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಹೆಚ್ಚಳ; ಬೆಳ್ಳಿ 5 ರೂ ದುಬಾರಿ

Gold Price 10 July 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಏರಿದರೆ, ಬೆಳ್ಳಿ 5 ರೂ ಜಾಸ್ತಿಗೊಂಡಿದೆ. ಆಭರಣ ಚಿನ್ನದ ಬೆಲೆ 13,130 ನಿಂದ 13,275 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 4,482 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಹೆಚ್ಚಳ; ಬೆಳ್ಳಿ 5 ರೂ ದುಬಾರಿ
ಚಿನ್ನ
Image Credit source: PTI

Updated on: Jul 10, 2026 | 11:22 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 145 ರೂ ಏರಿದರೆ, ಬೆಳ್ಳಿ 5 ರೂ ಜಾಸ್ತಿಗೊಂಡಿದೆ.
  • ಆಭರಣ ಚಿನ್ನದ ಬೆಲೆ 13,130 ನಿಂದ 13,275 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ.

ನವದೆಹಲಿ, ಜುಲೈ 10: ಚಿನ್ನದ ಬೆಲೆಯ ಸತತ ಇಳಿಕೆಯ ನಾಗಾಲೋಟಕ್ಕೆ ಬ್ರೇಕ್ ಬಿದ್ದಿದೆ. ಇವತ್ತು ಶುಕ್ರವಾರ ಬಂಗಾರದ ದರದಲ್ಲಿ ಗ್ರಾಮ್​ಗೆ 145 ರೂಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿದೆ. ಚಿನ್ನದಂತೆ ಬೆಳ್ಳಿಯೂ ಬೆಲೆ (Silver Price) ಹೆಚ್ಚಳ ಪಡೆಯುತ್ತಿದೆ. ಇಂದು ಅದರ ಬೆಲೆ ಗ್ರಾಮ್​ಗೆ ಐದು ರೂ ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,482 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,275 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,862 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,482 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,275 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,275 ರೂ
  • ಚೆನ್ನೈ: 13,350 ರೂ
  • ಮುಂಬೈ: 13,275 ರೂ
  • ದೆಹಲಿ: 13,290 ರೂ
  • ಕೋಲ್ಕತಾ: 13,275 ರೂ
  • ಕೇರಳ: 13,275 ರೂ
  • ಅಹ್ಮದಾಬಾದ್: 13,280 ರೂ
  • ಜೈಪುರ್: 13,290 ರೂ
  • ಲಕ್ನೋ: 13,290 ರೂ
  • ಭುವನೇಶ್ವರ್: 13,275 ರೂ

ಇದನ್ನೂ ಓದಿ: ಬೆಂಗಳೂರಿನ Oben Rorr Evo ಎಲೆಕ್ಟ್ರಿಕ್ ಬೈಕ್ ಸೂಪರ್ ಹಿಟ್; ಬೆಲೆ 1.25 ಲಕ್ಷ, 180 ಕಿಮೀ ರೇಂಜ್; ಬಿಸಿ ದೋಸೆಯಂತೆ ವಾಹನಗಳ ಮಾರಾಟ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 552 ರಿಂಗಿಟ್ (12,931 ರುಪಾಯಿ)
  • ದುಬೈ: 497.25 ಡಿರಾಮ್ (12,905 ರುಪಾಯಿ)
  • ಅಮೆರಿಕ: 136 ಡಾಲರ್ (12,964 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,400 ರುಪಾಯಿ)
  • ಕತಾರ್: 498.50 ಕತಾರಿ ರಿಯಾಲ್ (13,035 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (12,925 ರುಪಾಯಿ)
  • ಓಮನ್: 52.90 ಒಮಾನಿ ರಿಯಾಲ್ (13,098 ರುಪಾಯಿ)
  • ಕುವೇತ್: 41.52 ಕುವೇತಿ ದಿನಾರ್ (12,862 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Fri, 10 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us