AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 45 ರೂ, ಬೆಳ್ಳಿ ಬೆಲೆ 5 ರೂ ಇಳಿಕೆ

Gold Price 12 July 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ 45 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 13,275 ರೂನಿಂದ 13,230 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,433 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 45 ರೂ, ಬೆಳ್ಳಿ ಬೆಲೆ 5 ರೂ ಇಳಿಕೆ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2026 | 2:47 PM

Share

ಮುಖ್ಯಾಂಶಗಳು

  • ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ 45 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,275 ರೂನಿಂದ 13,230 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ.

ನವದೆಹಲಿ, ಜುಲೈ 12: ಶುಕ್ರವಾರ ಗ್ರಾಮ್​ಗೆ 145 ರೂ ಏರಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ 45 ರೂ ತಗ್ಗಿದೆ. ಚಿನ್ನದಂತೆ ಬೆಳ್ಳಿಯ ಬೆಲೆಯೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಬಂಗಾರದ ದರ ಕೆಲವೆಡೆ ಅಲ್ಪ ಇಳಿಕೆ ಕಂಡರೆ, ಇನ್ನೂ ಕೆಲವೆಡೆ ಅಲ್ಪ ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 5 ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,400 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,825 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,230 ರೂ
  • ಚೆನ್ನೈ: 13,300 ರೂ
  • ಮುಂಬೈ: 13,230 ರೂ
  • ದೆಹಲಿ: 13,245 ರೂ
  • ಕೋಲ್ಕತಾ: 13,230 ರೂ
  • ಕೇರಳ: 13,230 ರೂ
  • ಅಹ್ಮದಾಬಾದ್: 13,235 ರೂ
  • ಜೈಪುರ್: 13,245 ರೂ
  • ಲಕ್ನೋ: 13,245 ರೂ
  • ಭುವನೇಶ್ವರ್: 13,230 ರೂ

ಇದನ್ನೂ ಓದಿ: ಬಿಎಸ್ಸೆನ್ನೆಲ್​ನಿಂದ ಸೆಟಿಲೈಟ್ ಫೋನ್; ಬೆಲೆ 1.34 ಲಕ್ಷ ರೂ; ಮಾಸಿಕ ಸಬ್​ಸ್ಕ್ರಿಪ್ಷನ್ ಪ್ಲಾನ್ 3,500 ರೂನಿಂದ ಆರಂಭ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 555 ರಿಂಗಿಟ್ (13,005 ರುಪಾಯಿ)
  • ದುಬೈ: 494 ಡಿರಾಮ್ (12,828 ರುಪಾಯಿ)
  • ಅಮೆರಿಕ: 135.50 ಡಾಲರ್ (12,923 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,402 ರುಪಾಯಿ)
  • ಕತಾರ್: 496 ಕತಾರಿ ರಿಯಾಲ್ (12,977 ರೂ)
  • ಸೌದಿ ಅರೇಬಿಯಾ: 510 ಸೌದಿ ರಿಯಾಲ್ (12,955 ರುಪಾಯಿ)
  • ಓಮನ್: 52.55 ಒಮಾನಿ ರಿಯಾಲ್ (13,017 ರುಪಾಯಿ)
  • ಕುವೇತ್: 41.33 ಕುವೇತಿ ದಿನಾರ್ (12,808 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?