Gold Rates 12 October: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 12 October 2026: ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 40 ರೂ ಇಳಿಕೆಯಾದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 13,880 ರೂನಿಂದ 13,840 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,098 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 12 October: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Oct 12, 2026 | 10:50 AM

ನವದೆಹಲಿ, ಅಕ್ಟೋಬರ್ 12: ವಾರಾಂತ್ಯದಲ್ಲಿ 175 ರೂ ಏರಿಕೆ ಸೇರಿದಂತೆ ಕಳೆದ ವಾರ 205 ರೂ ನಿವ್ವಳ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ 40 ರೂ ತಗ್ಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಯಥಾಸ್ಥಿತಿ ಹೊಂದಿವೆ. ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳಲ್ಲೂ ಬಹಳ ಅಲ್ಪ ಏರುಪೇರಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,098
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,840
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,324
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,840 ರೂ
  • ಚೆನ್ನೈ: 13,840 ರೂ
  • ಮುಂಬೈ: 13,840 ರೂ
  • ದೆಹಲಿ: 13,855
  • ಕೋಲ್ಕತಾ: 13,840 ರೂ
  • ಕೇರಳ: 13,840 ರೂ
  • ಅಹ್ಮದಾಬಾದ್: 13,845 ರೂ
  • ಜೈಪುರ್: 13,855
  • ಲಕ್ನೋ: 13,855
  • ಭುವನೇಶ್ವರ್: 13,840 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134.88 ಡಾಲರ್ (12,904 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.962 ಡಾಲರ್ (188 ರುಪಾಯಿ)

ಇದನ್ನೂ ಓದಿ: ಜಿಯೋದ ಎಐ ಕನ್ನಡಕ..! ಯುಪಿಐ ಪಾವತಿ, ಲೈವ್ ಟ್ರಾನ್ಸ್​ಲೇಶನ್, ಲೈವ್ ಕಾಮೆಂಟರಿ ಮಾಡಬಲ್ಲುದು ಈ ಸ್ಮಾರ್ಟ್ ಗ್ಲಾಸ್

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,098 ರುಪಾಯಿ
  • ಮಲೇಷ್ಯಾ: 567 ರಿಂಗಿಟ್ (13,312 ರುಪಾಯಿ)
  • ದುಬೈ: 505.50 ಡಿರಾಮ್ (13,189 ರುಪಾಯಿ)
  • ಅಮೆರಿಕ: 138.50 ಡಾಲರ್ (13,266 ರುಪಾಯಿ)
  • ಸಿಂಗಾಪುರ: 183.90 ಸಿಂಗಾಪುರ್ ಡಾಲರ್ (13,768 ರುಪಾಯಿ)
  • ಕತಾರ್: 506 ಕತಾರಿ ರಿಯಾಲ್ (13,297 ರೂ)
  • ಸೌದಿ ಅರೇಬಿಯಾ: 520 ಸೌದಿ ರಿಯಾಲ್ (13,265 ರುಪಾಯಿ)
  • ಓಮನ್: 53.65 ಒಮಾನಿ ರಿಯಾಲ್ (13,346 ರುಪಾಯಿ)
  • ಕುವೇತ್: 42.29 ಕುವೇತಿ ದಿನಾರ್ (13,146 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 245 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 245 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us