Gold Rates 13 October: ಹತ್ತು ಗ್ರಾಮ್ ಚಿನ್ನದ ಬೆಲೆ 1,550 ರೂ ಇಳಿಕೆ

Gold Price 13 October 2026: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 155 ರೂ ಇಳಿದಿದೆ. ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,840 ರೂನಿಂದ 13,685 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,929 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 13 October: ಹತ್ತು ಗ್ರಾಮ್ ಚಿನ್ನದ ಬೆಲೆ 1,550 ರೂ ಇಳಿಕೆ
ಚಿನ್ನ
Image Credit source: PTI

Updated on: Oct 13, 2026 | 4:33 PM

ನವದೆಹಲಿ, ಅಕ್ಟೋಬರ್ 13: ಚಿನ್ನದ ಬೆಲೆ ಕುಸಿತ ಮುಂದುವರಿದಿದೆ. ನಿನ್ನೆ 40 ರೂ ಇಳಿದಿದ್ದ ಬೆಲೆ ಇವತ್ತು ಮಂಗಳವಾರ 155 ರೂಗಳಷ್ಟು ಕಡಿಮೆಗೊಂಡಿದೆ. ಎರಡು ದಿನದಲ್ಲಿ ಬಂಗಾರದ ಬೆಲೆ ಬಹುತೇಕ 200 ರೂಗಳಷ್ಟು ತಗ್ಗಿದಂತಾಗಿದೆ. ಬೆಳ್ಳಿ ಬೆಲೆಯಲ್ಲೂ ಐದು ರೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತುಸು ಏರು ಪೇರಾಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಇಳಿದಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,36,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,36,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,929
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,685
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,197
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,685 ರೂ
  • ಚೆನ್ನೈ: 13,685 ರೂ
  • ಮುಂಬೈ: 13,685 ರೂ
  • ದೆಹಲಿ: 13,700
  • ಕೋಲ್ಕತಾ: 13,685 ರೂ
  • ಕೇರಳ: 13,685 ರೂ
  • ಅಹ್ಮದಾಬಾದ್: 13,690 ರೂ
  • ಜೈಪುರ್: 13,700
  • ಲಕ್ನೋ: 13,700
  • ಭುವನೇಶ್ವರ್: 13,685 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 134.40 ಡಾಲರ್ (12,797 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.938 ಡಾಲರ್ (184 ರುಪಾಯಿ)

ಇದನ್ನೂ ಓದಿ: ವರ್ತಕರ ಮನವಿ ಹಿನ್ನೆಲೆ, ಯುಪಿಐ ಎಂಡಿಆರ್ ಶುಲ್ಕ ಜಾರಿ ಕ್ರಮ ದೀಪಾವಳಿ ನಂತರ ಎಂದ ಎನ್​ಪಿಸಿಐ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,929 ರುಪಾಯಿ
  • ಮಲೇಷ್ಯಾ: 561 ರಿಂಗಿಟ್ (13,083 ರುಪಾಯಿ)
  • ದುಬೈ: 502.75 ಡಿರಾಮ್ (13,037 ರುಪಾಯಿ)
  • ಅಮೆರಿಕ: 137.50 ಡಾಲರ್ (13,097 ರುಪಾಯಿ)
  • ಸಿಂಗಾಪುರ: 181.90 ಸಿಂಗಾಪುರ್ ಡಾಲರ್ (13,536 ರುಪಾಯಿ)
  • ಕತಾರ್: 503 ಕತಾರಿ ರಿಯಾಲ್ (13,144 ರೂ)
  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,122 ರುಪಾಯಿ)
  • ಓಮನ್: 53.30 ಒಮಾನಿ ರಿಯಾಲ್ (13,186 ರುಪಾಯಿ)
  • ಕುವೇತ್: 42.29 ಕುವೇತಿ ದಿನಾರ್ (13,066 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us