AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 13 September: ಚಿನ್ನದ ಬೆಲೆ ಗ್ರಾಮ್​ಗೆ 155 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ

Gold Price 13 September 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ 155 ರೂ ಹೆಚ್ಚಿದೆ. ಬೆಳ್ಳಿ ಬೆಲೆ ಬದಲಾಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 14,015 ರೂನಿಂದ 14,170 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಎಲೆ 15,458 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 13 September: ಚಿನ್ನದ ಬೆಲೆ ಗ್ರಾಮ್​ಗೆ 155 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2026 | 11:46 AM

Share

ನವದೆಹಲಿ, ಸೆಪ್ಟೆಂಬರ್ 13: ಚಿನ್ನದ ಬೆಲೆ ಈ ವಾರ ನಿರಂತರವಾಗಿ ದಿನವೂ ಏರಿಳಿತ ಕಾಣುತ್ತಿದೆ. ಒಂದು ದಿನ ಏರಿದರೆ, ಮರುದಿನ ಇಳಿಕೆ, ಮತ್ತೆ ಏರಿಕೆ, ಮತ್ತೆ ಇಳಿಕೆ, ಹೀಗೆ ಏರಿಳಿತ ಮುಂದುವರಿಯುತ್ತಿದೆ. ಈ ವಾರಾಂತ್ಯದಲ್ಲಿ ಅದರ ಬೆಲೆ ಗ್ರಾಮ್​ಗೆ 155 ರೂ ಹೆಚ್ಚಳಗೊಂಡಿದೆ. ವಿದೇಶಗಳಲ್ಲಿ ಅಲ್ಪ ವ್ಯತ್ಯಯಗಳು ಮುಂದುವರಿದಿವೆ. ಚಿನ್ನಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಇನ್ನು, ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತುಸು ಹೆಚ್ಚಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,458
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,170
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,594
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,170 ರೂ
  • ಚೆನ್ನೈ: 14,170 ರೂ
  • ಮುಂಬೈ: 14,170 ರೂ
  • ದೆಹಲಿ: 14,185
  • ಕೋಲ್ಕತಾ: 14,170 ರೂ
  • ಕೇರಳ: 14,170 ರೂ
  • ಅಹ್ಮದಾಬಾದ್: 14,175 ರೂ
  • ಜೈಪುರ್: 14,185
  • ಲಕ್ನೋ: 14,185
  • ಭುವನೇಶ್ವರ್: 14,170 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 139.82 ಡಾಲರ್ (13,360 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.073 ಡಾಲರ್ (198 ರುಪಾಯಿ)

ಇದನ್ನೂ ಓದಿ: ಕಾರಿನ ವೇಗ ಸ್ಪೀಡೋಮೀಟರ್‌ಗೆ ಹೇಗೆ ತಿಳಿಯುತ್ತದೆ? ಕಾರಿನೊಳಗೆ ನಡೆಯುವ ಪ್ರಕ್ರಿಯೆ ಏನು?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,458 ರುಪಾಯಿ
  • ಮಲೇಷ್ಯಾ: 585 ರಿಂಗಿಟ್ (13,735 ರುಪಾಯಿ)
  • ದುಬೈ: 524 ಡಿರಾಮ್ (13,635 ರುಪಾಯಿ)
  • ಅಮೆರಿಕ: 143.50 ಡಾಲರ್ (13,714 ರುಪಾಯಿ)
  • ಸಿಂಗಾಪುರ: 187.20 ಸಿಂಗಾಪುರ್ ಡಾಲರ್ (14,119 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,738 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,716 ರುಪಾಯಿ)
  • ಓಮನ್: 55.65 ಒಮಾನಿ ರಿಯಾಲ್ (13,814 ರುಪಾಯಿ)
  • ಕುವೇತ್: 43.33 ಕುವೇತಿ ದಿನಾರ್ (13,504 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More