Gold Rates 14 September: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ

Gold Price 14 September 2026: ಚಿನ್ನದ ಬೆಲೆ ಇಂದು ಸೋಮವಾರ 45 ರೂ ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,170 ರೂನಿಂದ 14,125 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,409 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 14 September: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Getty Images

Updated on: Sep 14, 2026 | 11:32 AM

ನವದೆಹಲಿ, ಸೆಪ್ಟೆಂಬರ್ 14: ಚಿನ್ನದ ಬೆಲೆಯಲ್ಲಿ ದಿನದಿಂದ ದಿನಕ್ಕೆ ವ್ಯತ್ಯಯವಾಗುವುದು ಮುಂದುವರಿದಿದೆ. ಗಣೇಶ ಚತುರ್ಥಿಯಾದ ಇವತ್ತು ಬಂಗಾರದ ದರದಲ್ಲಿ ಗ್ರಾಮ್​ಗೆ 45 ರೂ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಹಾಗೂ ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳಲ್ಲೂ ಹೆಚ್ಚಿನ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,409
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,125
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,557
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,125 ರೂ
  • ಚೆನ್ನೈ: 14,125 ರೂ
  • ಮುಂಬೈ: 14,125 ರೂ
  • ದೆಹಲಿ: 14,140
  • ಕೋಲ್ಕತಾ: 14,125 ರೂ
  • ಕೇರಳ: 14,125 ರೂ
  • ಅಹ್ಮದಾಬಾದ್: 14,130 ರೂ
  • ಜೈಪುರ್: 14,140
  • ಲಕ್ನೋ: 14,140
  • ಭುವನೇಶ್ವರ್: 14,125 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 139.13 ಡಾಲರ್ (13,316 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.057 ಡಾಲರ್ (196 ರುಪಾಯಿ)

ಇದನ್ನೂ ಓದಿ: ಗಣೇಶ ಹಬ್ಬಕ್ಕೆ ಷೇರು ಮಾರುಕಟ್ಟೆ ಕ್ಲೋಸ್: ಬೆಂಗಳೂರು ಸೇರಿ ಹಲವೆಡೆ ಬ್ಯಾಂಕ್​ಗಳು ಬಂದ್, ಎಟಿಎಂ-ಯುಪಿಐ ಎಂದಿನಂತೆ ಲಭ್ಯ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,409 ರುಪಾಯಿ
  • ಮಲೇಷ್ಯಾ: 583 ರಿಂಗಿಟ್ (13,694 ರುಪಾಯಿ)
  • ದುಬೈ: 524 ಡಿರಾಮ್ (13,653 ರುಪಾಯಿ)
  • ಅಮೆರಿಕ: 143.50 ಡಾಲರ್ (13,733 ರುಪಾಯಿ)
  • ಸಿಂಗಾಪುರ: 188.40 ಸಿಂಗಾಪುರ್ ಡಾಲರ್ (14,208 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,757 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,736 ರುಪಾಯಿ)
  • ಓಮನ್: 55.65 ಒಮಾನಿ ರಿಯಾಲ್ (13,833 ರುಪಾಯಿ)
  • ಕುವೇತ್: 43.33 ಕುವೇತಿ ದಿನಾರ್ (13,512 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us