Gold Rate: 15,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 15 June 2026: ಇಂದು ಸೋಮವಾರ ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 225 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,665 ರೂನಿಂದ 13,890 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,153 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rate: 15,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: Jun 15, 2026 | 11:06 AM

ನವದೆಹಲಿ, ಜೂನ್ 15: ಕಳೆದ ಒಂದೆರಡು ವಾರಗಳಿಂದ ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (gold rates) ಎರಡ್ಮೂರು ದಿನಗಳಿಂದ ಸತತ ಏರಿಕೆಯ ಹಾದಿಯಲ್ಲಿದೆ. ಎರಡು ದಿನದಲ್ಲಿ 300ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ 225 ರೂ ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್​ಗೆ 5 ರೂ ಹೆಚ್ಚಿದೆ. ಆದರೆ, ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಿನ ವ್ಯತ್ಯಯ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,365 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,153 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,890 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,890 ರೂ
  • ಚೆನ್ನೈ: 14,070 ರೂ
  • ಮುಂಬೈ: 13,890 ರೂ
  • ದೆಹಲಿ: 13,905 ರೂ
  • ಕೋಲ್ಕತಾ: 13,890 ರೂ
  • ಕೇರಳ: 13,890 ರೂ
  • ಅಹ್ಮದಾಬಾದ್: 13,895 ರೂ
  • ಜೈಪುರ್: 13,905 ರೂ
  • ಲಕ್ನೋ: 13,905 ರೂ
  • ಭುವನೇಶ್ವರ್: 13,890 ರೂ

ಇದನ್ನೂ ಓದಿ: ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 575 ರಿಂಗಿಟ್ (13,440 ರುಪಾಯಿ)
  • ದುಬೈ: 508.50 ಡಿರಾಮ್ (13,100 ರುಪಾಯಿ)
  • ಅಮೆರಿಕ: 138.50 ಡಾಲರ್ (13,105 ರುಪಾಯಿ)
  • ಸಿಂಗಾಪುರ: 190 ಸಿಂಗಾಪುರ್ ಡಾಲರ್ (14,024 ರುಪಾಯಿ)
  • ಕತಾರ್: 509.50 ಕತಾರಿ ರಿಯಾಲ್ (13,244 ರೂ)
  • ಸೌದಿ ಅರೇಬಿಯಾ: 523 ಸೌದಿ ರಿಯಾಲ್ (13,187 ರುಪಾಯಿ)
  • ಓಮನ್: 53.45 ಒಮಾನಿ ರಿಯಾಲ್ (13,136 ರುಪಾಯಿ)
  • ಕುವೇತ್: 42.71 ಕುವೇತಿ ದಿನಾರ್ (13,153 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us