AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 15 October: ಈ ವಾರ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 3,650 ರೂ ಕುಸಿತ

Gold Price 15 October 2026: ಬಂಗಾರದ ಬೆಲೆ ಇವತ್ತು ಗುರುವಾರ 75 ರೂ ತಗ್ಗಿದೆ. ಈ ವಾರ ಒಟ್ಟು 365 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ 5 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 13,590 ರೂನಿಂದ 13,515 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,744 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 230 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rates 15 October: ಈ ವಾರ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 3,650 ರೂ ಕುಸಿತ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 15, 2026 | 12:05 PM

Share

ನವದೆಹಲಿ, ಅಕ್ಟೋಬರ್ 15: ಚಿನ್ನದ ಬೆಲೆಯ ಸತತ ಕುಸಿತ ಮುಂದುವರಿದಿದೆ. ನಿನ್ನೆ 95 ರೂ ಇಳಿದಿದ್ದ ಬೆಲೆ ಇವತ್ತು 75 ರೂ ತಗ್ಗಿದೆ. ಈ ವಾರ ಬಂಗಾರದ ಬೆಲೆಯಲ್ಲಿ 365 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಹೆಚ್ಚಿನ ಕಡೆ ಅಪರಂಜಿ ಚಿನ್ನದ ಬೆಲೆ 13,000 ರೂ ಒಳಗೆ ಬಂದಿದೆ. ಬೆಳ್ಳಿ ಬೆಲೆಯೂ ಐದು ರೂ ತಗ್ಗಿದ್ದು 230 ರೂ ಆಗಿದೆ. ಸ್ಟಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಅಲ್ಪ ಇಳಿಕೆ ಕಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,35,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,47,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,35,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 15ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,744
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,515
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,058
  • ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,515 ರೂ
  • ಚೆನ್ನೈ: 13,515 ರೂ
  • ಮುಂಬೈ: 13,515 ರೂ
  • ದೆಹಲಿ: 13,530
  • ಕೋಲ್ಕತಾ: 13,515 ರೂ
  • ಕೇರಳ: 13,515 ರೂ
  • ಅಹ್ಮದಾಬಾದ್: 13,520 ರೂ
  • ಜೈಪುರ್: 13,530
  • ಲಕ್ನೋ: 13,530
  • ಭುವನೇಶ್ವರ್: 13,515 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 133.28 ಡಾಲರ್ (12,650 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.801 ಡಾಲರ್ (171 ರುಪಾಯಿ)

ಇದನ್ನೂ ಓದಿ: ಸಾಲದ ಹೊರೆ ಕಡಿಮೆಯಾಗ್ಬೇಕು ಅಂದ್ರೆ ಈ ಕೆಲ್ಸಗಳನ್ನು ಮೊದ್ಲು ಮಾಡಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,744 ರುಪಾಯಿ
  • ಮಲೇಷ್ಯಾ: 559 ರಿಂಗಿಟ್ (13,006 ರುಪಾಯಿ)
  • ದುಬೈ: 492.75 ಡಿರಾಮ್ (12,740 ರುಪಾಯಿ)
  • ಅಮೆರಿಕ: 135 ಡಾಲರ್ (12,818 ರುಪಾಯಿ)
  • ಸಿಂಗಾಪುರ: 181.70 ಸಿಂಗಾಪುರ್ ಡಾಲರ್ (13,458 ರುಪಾಯಿ)
  • ಕತಾರ್: 494 ಕತಾರಿ ರಿಯಾಲ್ (12,869 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (12,874 ರುಪಾಯಿ)
  • ಓಮನ್: 52.35 ಒಮಾನಿ ರಿಯಾಲ್ (12,911 ರುಪಾಯಿ)
  • ಕುವೇತ್: 41.27 ಕುವೇತಿ ದಿನಾರ್ (12,718 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 230 ರೂ
  • ಚೆನ್ನೈ: 240 ರೂ
  • ಮುಂಬೈ: 230 ರೂ
  • ದೆಹಲಿ: 230 ರೂ
  • ಕೋಲ್ಕತಾ: 230 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 230 ರೂ
  • ಜೈಪುರ್: 230 ರೂ
  • ಲಕ್ನೋ: 230 ರೂ
  • ಭುವನೇಶ್ವರ್: 240 ರೂ
  • ಪುಣೆ: 230

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Thu, 15 October 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More