AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಗ್ರಾಮ್​ಗೆ 25 ರೂ ಕಡಿಮೆ

Gold Price 16 July 2026: ಚಿನ್ನದ ಬೆಲೆ ಗುರುವಾರ ಗ್ರಾಮ್​ಗೆ 25 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,160 ರೂನಿಂದ 13,135 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,329 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಗ್ರಾಮ್​ಗೆ 25 ರೂ ಕಡಿಮೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 16, 2026 | 1:13 PM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ ಗುರುವಾರ ಗ್ರಾಮ್​ಗೆ 25 ರೂ ಕಡಿಮೆಗೊಂಡಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,160 ರೂನಿಂದ 13,135 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ.

ನವದೆಹಲಿ, ಜುಲೈ 16: ಚಿನ್ನದ ಬೆಲೆ ಹೊಯ್ದಾಟದ ಹಂತಕ್ಕೆ ಬಂದಿರುವಂತಿದೆ. ಮೊನ್ನೆ 140 ರೂ ಕಡಿಮೆಗೊಂಡು, ನಿನ್ನೆ 70 ರೂ ಹೆಚ್ಚಿದ್ದ ಬಂಗಾರದ ದರ (Gold Price) ಇವತ್ತು 25 ರೂ ತಗ್ಗಿದೆ. ವಿದೇಶಗಳಲ್ಲೂ ಇದರ ಬೆಲೆಯ ತೂಗುಯ್ಯಾಲೆ ಮುಂದುವರಿದಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಕಳೆದ ಕೆಲ ದಿನಗಳಿಂದ ಇರುವ 235 ರು ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,329 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,135 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,747 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,329 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,135 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,135 ರೂ
  • ಚೆನ್ನೈ: 13,150 ರೂ
  • ಮುಂಬೈ: 13,135 ರೂ
  • ದೆಹಲಿ: 13,150 ರೂ
  • ಕೋಲ್ಕತಾ: 13,135 ರೂ
  • ಕೇರಳ: 13,135 ರೂ
  • ಅಹ್ಮದಾಬಾದ್: 13,140 ರೂ
  • ಜೈಪುರ್: 13,150 ರೂ
  • ಲಕ್ನೋ: 13,150 ರೂ
  • ಭುವನೇಶ್ವರ್: 13,135 ರೂ

ಇದನ್ನೂ ಓದಿ: ಹೊಸ ಐಆರ್​ಸಿಟಿಸಿ ವೆಬ್​ಸೈಟ್ ಸಿದ್ಧ; ಬೀಟಾ ಆವೃತ್ತಿ ಬಿಡುಗಡೆ; ರೈಲ್ವೆ ಟಿಕೆಟ್ ಬುಕಿಂಗ್ ಇನ್ಮುಂದೆ ಸರಳ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 542 ರಿಂಗಿಟ್ (12,814 ರುಪಾಯಿ)
  • ದುಬೈ: 486 ಡಿರಾಮ್ (12,745 ರುಪಾಯಿ)
  • ಅಮೆರಿಕ: 133.50 ಡಾಲರ್ (12,857 ರುಪಾಯಿ)
  • ಸಿಂಗಾಪುರ: 177.40 ಸಿಂಗಾಪುರ್ ಡಾಲರ್ (13,259 ರುಪಾಯಿ)
  • ಕತಾರ್: 491.50 ಕತಾರಿ ರಿಯಾಲ್ (12,987 ರೂ)
  • ಸೌದಿ ಅರೇಬಿಯಾ: 504 ಸೌದಿ ರಿಯಾಲ್ (12,924 ರುಪಾಯಿ)
  • ಓಮನ್: 51.60 ಒಮಾನಿ ರಿಯಾಲ್ (12,907 ರುಪಾಯಿ)
  • ಕುವೇತ್: 40.93 ಕುವೇತಿ ದಿನಾರ್ (12,820 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್