Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಅಪರಂಜಿ ಚಿನ್ನದ ಬೆಲೆ 15,137 ರೂ

Gold Price 16 June 2026: ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 15 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ. ಆಭರಣ ಚಿನ್ನದ ಬೆಲೆ 13,890 ರೂನಿಂದ 13,875 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,137 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಅಪರಂಜಿ ಚಿನ್ನದ ಬೆಲೆ 15,137 ರೂ
ಚಿನ್ನ
Image Credit source: Shutterstock

Updated on: Jun 16, 2026 | 10:40 AM

ನವದೆಹಲಿ, ಜೂನ್ 16: ಸತತ ಮೂರ್ನಾಲ್ಕು ದಿನಗಳ ಏರಿಕೆ ಬಳಿಕ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. ಮೂರು ದಿನಗಳಲ್ಲಿ 500ಕ್ಕೂ ಹೆಚ್ಚು ರುಪಾಯಿಗಳಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗ್ರಾಮ್​ಗೆ 15 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಭರ್ಜರಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,137 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,875 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,353 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,137 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,875 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,875 ರೂ
  • ಚೆನ್ನೈ: 14,060 ರೂ
  • ಮುಂಬೈ: 13,875 ರೂ
  • ದೆಹಲಿ: 13,890 ರೂ
  • ಕೋಲ್ಕತಾ: 13,875 ರೂ
  • ಕೇರಳ: 13,875 ರೂ
  • ಅಹ್ಮದಾಬಾದ್: 13,880 ರೂ
  • ಜೈಪುರ್: 13,890 ರೂ
  • ಲಕ್ನೋ: 13,890 ರೂ
  • ಭುವನೇಶ್ವರ್: 13,875 ರೂ

ಇದನ್ನೂ ಓದಿ: ಅಡ್ವಾನ್ಸ್ ಟ್ಯಾಕ್ಸ್ ಪಾವತಿಗೆ ಇಂದೇ ಕೊನೆಯ ದಿನ; ಡೆಡ್​ಲೈನ್ ಮಿಸ್ ಆದವರಿಗೆ ಏನು ದಂಡ?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 577 ರಿಂಗಿಟ್ (13,433 ರುಪಾಯಿ)
  • ದುಬೈ: 521.25 ಡಿರಾಮ್ (13,423 ರುಪಾಯಿ)
  • ಅಮೆರಿಕ: 143.50 ಡಾಲರ್ (13,577 ರುಪಾಯಿ)
  • ಸಿಂಗಾಪುರ: 189.50 ಸಿಂಗಾಪುರ್ ಡಾಲರ್ (13,972 ರುಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,648 ರೂ)
  • ಸೌದಿ ಅರೇಬಿಯಾ: 541 ಸೌದಿ ರಿಯಾಲ್ (13,637 ರುಪಾಯಿ)
  • ಓಮನ್: 55.30 ಒಮಾನಿ ರಿಯಾಲ್ (13,587 ರುಪಾಯಿ)
  • ಕುವೇತ್: 44.20 ಕುವೇತಿ ದಿನಾರ್ (13,621 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us