Gold Rates 16 September: ಚಿನ್ನದ ಬೆಲೆ ತುಸು ಹೆಚ್ಚಳ; ಶುದ್ಧ ಬಂಗಾರದ ಬೆಲೆ 15,344 ರೂ

Gold Price 16 September 2026: ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 25 ರೂ ಏರಿದೆ. ಬೆಳ್ಳಿ ಬೆಲೆ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,040 ರೂನಿಂದ 14,065 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,344 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 16 September: ಚಿನ್ನದ ಬೆಲೆ ತುಸು ಹೆಚ್ಚಳ; ಶುದ್ಧ ಬಂಗಾರದ ಬೆಲೆ 15,344 ರೂ
ಚಿನ್ನ
Image Credit source: Getty Images

Updated on: Sep 16, 2026 | 10:47 AM

ನವದೆಹಲಿ, ಸೆಪ್ಟೆಂಬರ್ 16: ಸತತ ಎರಡು ದಿನ ಇಳಿದಿದ್ದ ಚಿನ್ನದ ಬೆಲೆ ಇವತ್ತು ಬುಧವಾರ ತುಸು ಹೆಚ್ಚಳ ಕಂಡಿದೆ. ಗ್ರಾಮ್​ಗೆ 25 ರೂನಷ್ಟು ಅಲ್ಪ ಏರಿಕೆಯಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಬದಲಾವಣೆ ಇಲ್ಲ. ಬೆಳ್ಳಿ ಬೆಲೆಯೂ ಬದಲಾವಣೆ ಆಗಿಲ್ಲ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಸ್ವಲ್ಪ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 16ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,344
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,065
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,508
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,065 ರೂ
  • ಚೆನ್ನೈ: 14,065 ರೂ
  • ಮುಂಬೈ: 14,065 ರೂ
  • ದೆಹಲಿ: 14,080
  • ಕೋಲ್ಕತಾ: 14,065 ರೂ
  • ಕೇರಳ: 14,065 ರೂ
  • ಅಹ್ಮದಾಬಾದ್: 14,070 ರೂ
  • ಜೈಪುರ್: 14,080
  • ಲಕ್ನೋ: 14,080
  • ಭುವನೇಶ್ವರ್: 14,065 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 138.94 ಡಾಲರ್ (13,326 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.075 ಡಾಲರ್ (199 ರುಪಾಯಿ)

ಇದನ್ನೂ ಓದಿ: ಯುಪಿಐ ಪೇಮೆಂಟ್​ಗೆ ಎಂಡಿಆರ್, ಮತ್ತಷ್ಟು ಸ್ಪಷ್ಟತೆ; 2,000 ರೂ ಮೇಲ್ಪಟ್ಟ ಪಾವತಿಗೆ ಎಷ್ಟಿರುತ್ತೆ ಶುಲ್ಕ? ಇಲ್ಲಿದೆ ಪೂರ್ಣ ವಿವರ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,344 ರುಪಾಯಿ
  • ಮಲೇಷ್ಯಾ: 578 ರಿಂಗಿಟ್ (13,566 ರುಪಾಯಿ)
  • ದುಬೈ: 517.50 ಡಿರಾಮ್ (13,513 ರುಪಾಯಿ)
  • ಅಮೆರಿಕ: 141 ಡಾಲರ್ (13,520 ರುಪಾಯಿ)
  • ಸಿಂಗಾಪುರ: 187.50 ಸಿಂಗಾಪುರ್ ಡಾಲರ್ (14,121 ರುಪಾಯಿ)
  • ಕತಾರ್: 516.50 ಕತಾರಿ ರಿಯಾಲ್ (13,588 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,557 ರುಪಾಯಿ)
  • ಓಮನ್: 54.90 ಒಮಾನಿ ರಿಯಾಲ್ (13,674 ರುಪಾಯಿ)
  • ಕುವೇತ್: 42.80 ಕುವೇತಿ ದಿನಾರ್ (13,369 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us