Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ

Gold Price 17 June 2026: ಮಂಗಳವಾರ ಗ್ರಾಮ್​ಗೆ 15 ರೂ ಕಡಿಮೆಯಾಗಿದ್ದ ಚಿನ್ನದ ಬೆಲೆ ಬುಧವಾರ 25 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,875 ರೂನಿಂದ 13,850 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,110 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 265 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 275 ರೂ ಇದೆ.

Gold Rate: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆ; 25 ರೂ ತಗ್ಗಿದ ಬಂಗಾರದ ದರ
ಚಿನ್ನ
Image Credit source: Shutterstock

Updated on: Jun 17, 2026 | 11:29 AM

ನವದೆಹಲಿ, ಜೂನ್ 17: ಚಿನ್ನದ ಬೆಲೆ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆಯಂತೆ ಇವತ್ತೂ ಸ್ವಲ್ಪ ತಗ್ಗಿದೆ. ನಿನ್ನೆ ಗ್ರಾಮ್​ಗೆ 15 ರೂ ಇಳಿದಿದ್ದ ಬಂಗಾರದ ದರ (Gold Rates) ಇವತ್ತು 25 ರೂ ಕಡಿಮೆಗೊಂಡಿದೆ. ಎರಡು ದಿನದಲ್ಲಿ 40 ರೂ ಇಳಿದಂತಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳ ಆಗಿರುವುದು ವಿಶೇಷ. ಬೆಳ್ಳಿ ಬೆಲೆ ನಿನ್ನೆಯಂತೆ ಇವತ್ತೂ ಬದಲಾವಣೆಗೊಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,38,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,332 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,110 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,850 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 265 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,850 ರೂ
  • ಚೆನ್ನೈ: 14,030 ರೂ
  • ಮುಂಬೈ: 13,850 ರೂ
  • ದೆಹಲಿ: 13,865 ರೂ
  • ಕೋಲ್ಕತಾ: 13,850 ರೂ
  • ಕೇರಳ: 13,850 ರೂ
  • ಅಹ್ಮದಾಬಾದ್: 13,855 ರೂ
  • ಜೈಪುರ್: 13,865 ರೂ
  • ಲಕ್ನೋ: 13,865 ರೂ
  • ಭುವನೇಶ್ವರ್: 13,850 ರೂ

ಇದನ್ನೂ ಓದಿ: E20 ಪೆಟ್ರೋಲ್ ಹಾಕಿಸುವ ವಾಹನಗಳ ಇನ್ಷೂರೆನ್ಸ್ ಕ್ಲೇಮ್ ತಿರಸ್ಕೃತವಾಗುತ್ತದಾ? ಸರ್ಕಾರದ ಸ್ಪಷ್ಟನೆ ಇದು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 582 ರಿಂಗಿಟ್ (13,515 ರುಪಾಯಿ)
  • ದುಬೈ: 522.25 ಡಿರಾಮ್ (13,427 ರುಪಾಯಿ)
  • ಅಮೆರಿಕ: 142.50 ಡಾಲರ್ (13,460 ರುಪಾಯಿ)
  • ಸಿಂಗಾಪುರ: 190.60 ಸಿಂಗಾಪುರ್ ಡಾಲರ್ (14,049 ರುಪಾಯಿ)
  • ಕತಾರ್: 521.50 ಕತಾರಿ ರಿಯಾಲ್ (13,530 ರೂ)
  • ಸೌದಿ ಅರೇಬಿಯಾ: 536 ಸೌದಿ ರಿಯಾಲ್ (13,493 ರುಪಾಯಿ)
  • ಓಮನ್: 55 ಒಮಾನಿ ರಿಯಾಲ್ (13,496 ರುಪಾಯಿ)
  • ಕುವೇತ್: 43.84 ಕುವೇತಿ ದಿನಾರ್ (13,493 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 265 ರೂ
  • ಚೆನ್ನೈ: 275 ರೂ
  • ಮುಂಬೈ: 265 ರೂ
  • ದೆಹಲಿ: 265 ರೂ
  • ಕೋಲ್ಕತಾ: 265 ರೂ
  • ಕೇರಳ: 275 ರೂ
  • ಅಹ್ಮದಾಬಾದ್: 265 ರೂ
  • ಜೈಪುರ್: 265 ರೂ
  • ಲಕ್ನೋ: 265 ರೂ
  • ಭುವನೇಶ್ವರ್: 275 ರೂ
  • ಪುಣೆ: 265

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us