Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 17 May 2026: ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದ್ದು, ಈ ಟ್ರೆಂಡ್ ವಾರಾಂತ್ಯದಲ್ಲೂ ಮುಂದುವರಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 14,675 ರೂನಿಂದ 14,385 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,693 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 290 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 305 ರೂ ಇದೆ.

Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: May 17, 2026 | 12:02 PM

ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್​ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,693 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,385 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,770 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,693 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,385 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,385 ರೂ
  • ಚೆನ್ನೈ: 14,750 ರೂ
  • ಮುಂಬೈ: 14,385 ರೂ
  • ದೆಹಲಿ: 14,400 ರೂ
  • ಕೋಲ್ಕತಾ: 14,385 ರೂ
  • ಕೇರಳ: 14,385 ರೂ
  • ಅಹ್ಮದಾಬಾದ್: 14,390 ರೂ
  • ಜೈಪುರ್: 14,400 ರೂ
  • ಲಕ್ನೋ: 14,400 ರೂ
  • ಭುವನೇಶ್ವರ್: 14,385 ರೂ

ಇದನ್ನೂ ಓದಿ: ಆಟೋ, ಟ್ಯಾಕ್ಸಿ​ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: CNG ದರ ಕೆಜಿಗೆ 1 ರೂ. ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 558 ರಿಂಗಿಟ್ (13,558 ರುಪಾಯಿ)
  • ದುಬೈ: 506.50 ಡಿರಾಮ್ (13,238 ರುಪಾಯಿ)
  • ಅಮೆರಿಕ: 142 ಡಾಲರ್ (13,632 ರುಪಾಯಿ)
  • ಸಿಂಗಾಪುರ: 180.70 ಸಿಂಗಾಪುರ್ ಡಾಲರ್ (13,546 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,273 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (13,175 ರುಪಾಯಿ)
  • ಓಮನ್: 53.70 ಒಮಾನಿ ರಿಯಾಲ್ (13,390 ರುಪಾಯಿ)
  • ಕುವೇತ್: 41.71 ಕುವೇತಿ ದಿನಾರ್ (13,070 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us