AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 17 September: ಬಂಗಾರದ ದರ 55 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 17 September 2026: ಬುಧವಾರ ಗ್ರಾಮ್​ಗೆ 25 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 55 ರೂ ತಗ್ಗಿದೆ. ಬೆಳ್ಳಿ ಬೆಲೆ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 14,065 ರೂನಿಂದ 14,010 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,284 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 17 September: ಬಂಗಾರದ ದರ 55 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 17, 2026 | 2:06 PM

Share

ನವದೆಹಲಿ, ಸೆಪ್ಟೆಂಬರ್ 17: ನಿನ್ನೆ 25 ರೂ ಏರಿದ್ದ ಚಿನ್ನದ ಬೆಲೆ ಇವತ್ತು ಇಳಿದಿದೆ. ಗುರುವಾರ ಬೆಳಗಿನ ವಹಿವಾಟಿನಲ್ಲಿ ಬಂಗಾರದ ಬೆಲೆ ಗ್ರಾಮ್​ಗೆ 55 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಹೆಚ್ಚಿದೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳು ತುಸು ತಗ್ಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 17ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,284
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,010
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,463
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,010 ರೂ
  • ಚೆನ್ನೈ: 14,010 ರೂ
  • ಮುಂಬೈ: 14,010 ರೂ
  • ದೆಹಲಿ: 14,025
  • ಕೋಲ್ಕತಾ: 14,010 ರೂ
  • ಕೇರಳ: 14,010 ರೂ
  • ಅಹ್ಮದಾಬಾದ್: 14,015 ರೂ
  • ಜೈಪುರ್: 14,025
  • ಲಕ್ನೋ: 14,025
  • ಭುವನೇಶ್ವರ್: 14,010 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 138.17 ಡಾಲರ್ (13,239 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.050 ಡಾಲರ್ (196 ರುಪಾಯಿ)

ಇದನ್ನೂ ಓದಿ: ಇಪಿಎಫ್​ಒ ವೇತನ ಮಿತಿ 15,000 ದಿಂದ 25,000 ರೂಗೆ ಏರಿಕೆ; ಹೆಚ್ಚು ಉದ್ಯೋಗಿಗಳಿಗೆ ಇಪಿಎಫ್ ಅಕೌಂಟ್, ಹೆಚ್ಚು ಕಾರ್ಪಸ್

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,284 ರುಪಾಯಿ
  • ಮಲೇಷ್ಯಾ: 583 ರಿಂಗಿಟ್ (13,668 ರುಪಾಯಿ)
  • ದುಬೈ: 523 ಡಿರಾಮ್ (13,665 ರುಪಾಯಿ)
  • ಅಮೆರಿಕ: 143.50 ಡಾಲರ್ (13,760 ರುಪಾಯಿ)
  • ಸಿಂಗಾಪುರ: 186.50 ಸಿಂಗಾಪುರ್ ಡಾಲರ್ (14,012 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,784 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,759 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,834 ರುಪಾಯಿ)
  • ಕುವೇತ್: 43.39 ಕುವೇತಿ ದಿನಾರ್ (13,562 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More