AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ

Gold Price 18 May 2026: ಇಂದು ಸೋಮವಾರ ಚಿನ್ನದ ಬೆಲೆ ಸ್ವಲ್ಪ ತಗ್ಗಿದರೆ, ಬೆಳ್ಳಿ ಬೆಲೆ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 14,385 ರೂನಿಂದ 14,320 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,622 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 290 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 300 ರೂ ಇದೆ.

Gold Rate: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 18, 2026 | 10:49 AM

Share

ನವದೆಹಲಿ, ಮೇ 18: ಕಳೆದ ವಾರ ಸಾವಿರ ರೂಗಳಷ್ಟು ಇಳಿದಿದ್ದ ಚಿನ್ನದ ಬೆಲೆ (Gold Rate) ಇವತ್ತು ಅಲ್ಪ ಕುಸಿತ ಕಂಡಿದೆ. ಸೋಮವಾರ ಇದರ ಬೆಲೆ ಒಂದು ಗ್ರಾಮ್​ಗೆ 65 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಸ್ಥಿರವಾಗಿದೆ. ಕೆಲವೆಡೆ ಸ್ವಲ್ಪ ಕಡಿಮೆಗೊಂಡಿದೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ (silver rate) ಇವತ್ತು 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 18ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,717 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,320 ರೂ
  • ಚೆನ್ನೈ: 14,750 ರೂ
  • ಮುಂಬೈ: 14,320 ರೂ
  • ದೆಹಲಿ: 14,335 ರೂ
  • ಕೋಲ್ಕತಾ: 14,320 ರೂ
  • ಕೇರಳ: 14,320 ರೂ
  • ಅಹ್ಮದಾಬಾದ್: 14,325 ರೂ
  • ಜೈಪುರ್: 14,335 ರೂ
  • ಲಕ್ನೋ: 14,335 ರೂ
  • ಭುವನೇಶ್ವರ್: 14,320 ರೂ

ಇದನ್ನೂ ಓದಿ: 18 ವರ್ಷದಿಂದ ಜಪಾನ್​ನಲ್ಲಿ ಬ್ಯುಸಿನೆಸ್ ಮಾಡ್ತಿದ್ದವನಿಗೆ ಅಂದ್ರು ‘ಗೋ ಬ್ಯಾಕ್ ಟು ಇಂಡಿಯಾ’

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 551 ರಿಂಗಿಟ್ (13,322 ರುಪಾಯಿ)
  • ದುಬೈ: 506.50 ಡಿರಾಮ್ (13,264 ರುಪಾಯಿ)
  • ಅಮೆರಿಕ: 142 ಡಾಲರ್ (13,656 ರುಪಾಯಿ)
  • ಸಿಂಗಾಪುರ: 180.90 ಸಿಂಗಾಪುರ್ ಡಾಲರ್ (13,573 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,297 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (13,198 ರುಪಾಯಿ)
  • ಓಮನ್: 53.70 ಒಮಾನಿ ರಿಯಾಲ್ (13,413 ರುಪಾಯಿ)
  • ಕುವೇತ್: 41.71 ಕುವೇತಿ ದಿನಾರ್ (13,088 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 290 ರೂ
  • ಚೆನ್ನೈ: 300 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 290 ರೂ
  • ಜೈಪುರ್: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 300 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More