Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ

Gold Price 19 May 2026: ನಿನ್ನೆ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಿದೆ. ನಿನ್ನೆ ತಗ್ಗಿದ್ದ ಬೆಳ್ಳಿ ಬೆಲೆ ಇವತ್ತು ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 14,320 ರೂನಿಂದ 14,395 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,704 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 300 ರೂ ಇದೆ.

Gold Rate: ಚಿನ್ನದ ಬೆಲೆ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ
ಚಿನ್ನ

Updated on: May 19, 2026 | 10:54 AM

ನವದೆಹಲಿ, ಮೇ 19: ಸತತವಾಗಿ ಇಳಿಯುತ್ತಿದ್ದ ಚಿನ್ನದ ಬೆಲೆ (Gold Rates) ಇಂದು ಮಂಗಳವಾರ ಗ್ರಾಮ್​ಗೆ 75 ರೂನಷ್ಟು ಹೆಚ್ಚಿದೆ. ಕಳೆದ ಹತ್ತು ದಿನದಲ್ಲಿ ಇದರ ಬೆಲೆ ಸುಮಾರು 430 ರೂಗಳಷ್ಟು ಹೆಚ್ಚಿದಂತಾಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇಂದು ಬಂಗಾರದ ದರ ಏರಿಕೆ ಆಗಿದೆ. ನಿನ್ನೆ ಏರಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 19ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,395 ರೂ
  • ಚೆನ್ನೈ: 14,870 ರೂ
  • ಮುಂಬೈ: 14,395 ರೂ
  • ದೆಹಲಿ: 14,410 ರೂ
  • ಕೋಲ್ಕತಾ: 14,395 ರೂ
  • ಕೇರಳ: 14,395 ರೂ
  • ಅಹ್ಮದಾಬಾದ್: 14,400 ರೂ
  • ಜೈಪುರ್: 14,410 ರೂ
  • ಲಕ್ನೋ: 14,410 ರೂ
  • ಭುವನೇಶ್ವರ್: 14,395 ರೂ

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ! ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 559 ರಿಂಗಿಟ್ (13,557 ರುಪಾಯಿ)
  • ದುಬೈ: 510.25 ಡಿರಾಮ್ (13,389 ರುಪಾಯಿ)
  • ಅಮೆರಿಕ: 142 ಡಾಲರ್ (13,684 ರುಪಾಯಿ)
  • ಸಿಂಗಾಪುರ: 181.50 ಸಿಂಗಾಪುರ್ ಡಾಲರ್ (13,666 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,326 ರೂ)
  • ಸೌದಿ ಅರೇಬಿಯಾ: 519 ಸೌದಿ ರಿಯಾಲ್ (13,329 ರುಪಾಯಿ)
  • ಓಮನ್: 53.85 ಒಮಾನಿ ರಿಯಾಲ್ (13,480 ರುಪಾಯಿ)
  • ಕುವೇತ್: 41.73 ಕುವೇತಿ ದಿನಾರ್ (13,054 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 300 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 300 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us