Gold Rates 21 Aug: 16,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 21 August 2026: ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರವೂ ಹೆಚ್ಚಿವೆ. ಚಿನ್ನದ ಬೆಲೆ ಗ್ರಾಮ್​ಗೆ 110 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 5 ರೂ ಏರಿದೆ. ಆಭರಣ ಚಿನ್ನದ ಬೆಲೆ 14,600 ರೂನಿಂದ 14,710 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,048 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.

Gold Rates 21 Aug: 16,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Aug 21, 2026 | 11:50 AM

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 110 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 5 ರೂ ಏರಿದೆ.
  • ಆಭರಣ ಚಿನ್ನದ ಬೆಲೆ 14,600 ರೂನಿಂದ 14,710 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 21: ಚಿನ್ನ, ಬೆಳ್ಳಿ ಬೆಲೆಗಳು ನಿನ್ನೆಯಂತೆ ಇವತ್ತು ಶುಕ್ರವಾರವೂ ಭರ್ಜರಿ ಹೆಚ್ಚಳ ಕಂಡಿವೆ. ಬಂಗಾರದ ದರ ಇಂದು ಗ್ರಾಮ್​ಗೆ 110 ರೂಗಳಷ್ಟು ಏರಿದೆ. ಎರಡು ದಿನದಲ್ಲಿ ಈ ಹಳದಿ ಲೋಹದ ಬೆಲೆಯಲ್ಲಿ (Gold Price) 505 ರೂಗಳಷ್ಟು ಏರಿಕೆ ಆಗಿದೆ. ನಿನ್ನೆ 10 ರೂ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು 5 ರೂ ಜಿಗಿದಿದೆ. ಹೆಚ್ಚಿನ ದೇಶಗಳಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. ಸ್ಪಾಟ್ ಗೋಲ್ಡ್ 2 ಡಾಲರ್ ಜಿಗಿದು 144 ಡಾಲರ್ ಬೆಲೆ ಮುಟ್ಟಿದೆ. ಸ್ಪಾಟ್ ಸಿಲ್ವರ್ ಬೆಲೆ ಗ್ರಾಮ್​ಗೆ 2.223 ಡಾಲರ್ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,47,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,60,480 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,47,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,048
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,710
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,036
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,710 ರೂ
  • ಚೆನ್ನೈ: 14,710 ರೂ
  • ಮುಂಬೈ: 14,710 ರೂ
  • ದೆಹಲಿ: 14,725
  • ಕೋಲ್ಕತಾ: 14,710 ರೂ
  • ಕೇರಳ: 14,710 ರೂ
  • ಅಹ್ಮದಾಬಾದ್: 14,715 ರೂ
  • ಜೈಪುರ್: 14,725
  • ಲಕ್ನೋ: 14,725
  • ಭುವನೇಶ್ವರ್: 14,710 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 146.44 ಡಾಲರ್ (14,016 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.223 ಡಾಲರ್ (213 ರುಪಾಯಿ)

ಇದನ್ನೂ ಓದಿ: ಒಬ್ಬ ವ್ಯಕ್ತಿ ಎಷ್ಟು ಸಿಮ್ ಕಾರ್ಡ್ ಹೊಂದಬಹುದು? ಸರ್ಕಾರ ತಂದಿದೆ ಹೊಸ ಮಾರ್ಗಸೂಚಿ; ಈ ಹೊಸ ನಿಯಮಗಳೇನು?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,048 ರುಪಾಯಿ
  • ಮಲೇಷ್ಯಾ: 603 ರಿಂಗಿಟ್ (14,264 ರುಪಾಯಿ)
  • ದುಬೈ: 544 ಡಿರಾಮ್ (14,177 ರುಪಾಯಿ)
  • ಅಮೆರಿಕ: 148 ಡಾಲರ್ (14,167 ರುಪಾಯಿ)
  • ಸಿಂಗಾಪುರ: 196.50 ಸಿಂಗಾಪುರ್ ಡಾಲರ್ (14,809 ರುಪಾಯಿ)
  • ಕತಾರ್: 544.50 ಕತಾರಿ ರಿಯಾಲ್ (14,298 ರೂ)
  • ಸೌದಿ ಅರೇಬಿಯಾ: 559 ಸೌದಿ ರಿಯಾಲ್ (14,259 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (14,434 ರುಪಾಯಿ)
  • ಕುವೇತ್: 45.14 ಕುವೇತಿ ದಿನಾರ್ (14,086 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:47 am, Fri, 21 August 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us