Gold Rate: ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂಗಳ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ

Gold Price 21 June 2026: ಈ ವಾರಾಂತ್ಯದಲ್ಲಿ ಚಿನ್ನದ ಬೆಲೆ ಅಲ್ಪ ಹೆಚ್ಚಳ ಪಡೆದರೆ, ಬೆಳ್ಳಿ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಆಭರಣ ಚಿನ್ನದ ಬೆಲೆ 13,370 ರೂನಿಂದ 13,390 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,608 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rate: ವಾರಾಂತ್ಯದಲ್ಲಿ ಗ್ರಾಮ್​ಗೆ 20 ರೂಗಳ ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ
ಚಿನ್ನ
Image Credit source: PTI

Updated on: Jun 21, 2026 | 12:19 PM

ನವದೆಹಲಿ, ಜೂನ್ 21: ಮೊನ್ನೆ ಗ್ರಾಮ್​ಗೆ 355 ರೂನಷ್ಟು ಭರ್ಜರಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Price) ಈ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳ ಪಡೆದಿದೆ. ಅಪರಂಜಿ ಚಿನ್ನದ ಬೆಲೆ 14,600 ರೂ ಗಡಿ ದಾಟಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಇಳಿಕೆಗೊಂಡಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಇದರ ಬೆಲೆ ಗ್ರಾಮ್​ಗೆ 250-260 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,608 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,390 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,956 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,608 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,390 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,390 ರೂ
  • ಚೆನ್ನೈ: 13,600 ರೂ
  • ಮುಂಬೈ: 13,390 ರೂ
  • ದೆಹಲಿ: 13,405 ರೂ
  • ಕೋಲ್ಕತಾ: 13,390 ರೂ
  • ಕೇರಳ: 13,390 ರೂ
  • ಅಹ್ಮದಾಬಾದ್: 13,395 ರೂ
  • ಜೈಪುರ್: 13,405 ರೂ
  • ಲಕ್ನೋ: 13,405 ರೂ
  • ಭುವನೇಶ್ವರ್: 13,390 ರೂ

ಇದನ್ನೂ ಓದಿ: ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 569 ರಿಂಗಿಟ್ (12,996 ರುಪಾಯಿ)
  • ದುಬೈ: 500 ಡಿರಾಮ್ (12,846 ರುಪಾಯಿ)
  • ಅಮೆರಿಕ: 137 ಡಾಲರ್ (12,928 ರುಪಾಯಿ)
  • ಸಿಂಗಾಪುರ: 183.20 ಸಿಂಗಾಪುರ್ ಡಾಲರ್ (13,389 ರುಪಾಯಿ)
  • ಕತಾರ್: 501.50 ಕತಾರಿ ರಿಯಾಲ್ (12,981 ರೂ)
  • ಸೌದಿ ಅರೇಬಿಯಾ: 517 ಸೌದಿ ರಿಯಾಲ್ (12,997 ರುಪಾಯಿ)
  • ಓಮನ್: 52.65 ಒಮಾನಿ ರಿಯಾಲ್ (12,905 ರುಪಾಯಿ)
  • ಕುವೇತ್: 41.82 ಕುವೇತಿ ದಿನಾರ್ (12,842 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us