AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 21 September: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 21 September 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಸೋಮವಾರ ಇಳಿದಿವೆ. ಚಿನ್ನದ ಬೆಲೆ 15 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 14,285 ರೂನಿಂದ 14,270 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,568 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 21 September: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 21, 2026 | 10:33 AM

Share

ನವದೆಹಲಿ, ಸೆಪ್ಟೆಂಬರ್ 21: ಕಳೆದ ವಾರದ ಕೊನೆಯಲ್ಲಿ ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಈ ವಾರದ ಆರಂಭವು ಇಳಿಕೆಯೊಂದಿಗೆ ಆಗಿದೆ. ಇಂದು ಸೋಮವಾರ ಬಂಗಾರದ ದರ ಗ್ರಾಮ್​ಗೆ 15 ರೂಗಳಷ್ಟು ಅಲ್ಪ ಕುಸಿತ ಕಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ವ್ಯತ್ಯಯ ಆಗಿಲ್ಲ. ಕೆಲವೆಡೆ ತುಸು ಇಳಿದಿದೆ. ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂ ತಗ್ಗಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ಬೆಲೆಯಲ್ಲಿ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 21ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,568
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,270
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,676
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,270 ರೂ
  • ಚೆನ್ನೈ: 14,270 ರೂ
  • ಮುಂಬೈ: 14,270 ರೂ
  • ದೆಹಲಿ: 14,285
  • ಕೋಲ್ಕತಾ: 14,270 ರೂ
  • ಕೇರಳ: 14,270 ರೂ
  • ಅಹ್ಮದಾಬಾದ್: 14,275 ರೂ
  • ಜೈಪುರ್: 14,285
  • ಲಕ್ನೋ: 14,285
  • ಭುವನೇಶ್ವರ್: 14,270 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 140.23 ಡಾಲರ್ (13,427 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.135 ಡಾಲರ್ (204 ರುಪಾಯಿ)

ಇದನ್ನೂ ಓದಿ: ಎನ್​ಪಿಎಸ್ ವಾತ್ಸಲ್ಯ ಯೋಜನೆಗೆ 2 ವರ್ಷ; 4.9 ಲಕ್ಷ ಅಕೌಂಟ್ ಸ್ಥಾಪನೆ; ಈ ಸ್ಕೀಮ್ ಪಡೆಯುವುದು ಹೇಗೆ, ವಿಶೇಷತೆ ಏನು ಇತ್ಯಾದಿ ವಿವರ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,568 ರುಪಾಯಿ
  • ಮಲೇಷ್ಯಾ: 587 ರಿಂಗಿಟ್ (13,791 ರುಪಾಯಿ)
  • ದುಬೈ: 527.50 ಡಿರಾಮ್ (13,751 ರುಪಾಯಿ)
  • ಅಮೆರಿಕ: 144 ಡಾಲರ್ (13,786 ರುಪಾಯಿ)
  • ಸಿಂಗಾಪುರ: 190.40 ಸಿಂಗಾಪುರ್ ಡಾಲರ್ (14,289 ರುಪಾಯಿ)
  • ಕತಾರ್: 527.50 ಕತಾರಿ ರಿಯಾಲ್ (13,855 ರೂ)
  • ಸೌದಿ ಅರೇಬಿಯಾ: 543 ಸೌದಿ ರಿಯಾಲ್ (13,840 ರುಪಾಯಿ)
  • ಓಮನ್: 56 ಒಮಾನಿ ರಿಯಾಲ್ (13,925 ರುಪಾಯಿ)
  • ಕುವೇತ್: 43.72 ಕುವೇತಿ ದಿನಾರ್ (13,619 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 260 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 260 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!