Gold Rates 23 September: ಚಿನ್ನದ ಬೆಲೆ ಗ್ರಾಮ್​ಗೆ 80 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 23 September 2026: ನಿನ್ನೆ, ಮೊನ್ನೆ ಭರ್ಜರಿ ಇಳಿದಿದ್ದ ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್​ಗೆ 80 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,135 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 15,420 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates 23 September: ಚಿನ್ನದ ಬೆಲೆ ಗ್ರಾಮ್​ಗೆ 80 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Sep 23, 2026 | 11:13 AM

ನವದೆಹಲಿ, ಸೆಪ್ಟೆಂಬರ್ 23: ಚಿನ್ನದ ಬೆಲೆ ಇಂದು ಬುಧವಾರ ಗ್ರಾಮ್​ಗೆ 80 ರೂ ಹೆಚ್ಚಳಗೊಂಡಿದೆ. ನಿನ್ನೆ ಮಂಗಳವಾರ ಇದರ ಬೆಲೆಯಲ್ಲಿ 215 ರೂಗಳಷ್ಟು ಕಡಿಮೆಗೊಂಡಿತ್ತು. ಮೊನ್ನೆಯೂ ಬೆಲೆ 15 ರೂ ತಗ್ಗಿತ್ತು. ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆಗೊಂಡಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,420
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,135
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,564
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,135 ರೂ
  • ಚೆನ್ನೈ: 14,135 ರೂ
  • ಮುಂಬೈ: 14,135 ರೂ
  • ದೆಹಲಿ: 14,150
  • ಕೋಲ್ಕತಾ: 14,135 ರೂ
  • ಕೇರಳ: 14,135 ರೂ
  • ಅಹ್ಮದಾಬಾದ್: 14,140 ರೂ
  • ಜೈಪುರ್: 14,150
  • ಲಕ್ನೋ: 14,150
  • ಭುವನೇಶ್ವರ್: 14,135 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 139.62 ಡಾಲರ್ (13,352 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.139 ಡಾಲರ್ (204 ರುಪಾಯಿ)

ಇದನ್ನೂ ಓದಿ: ಪಿಎಫ್ ಹಣವನ್ನು ಸರ್ಕಾರ ಏನು ಮಾಡುತ್ತದೆ, ಎಲ್ಲಿ ಹೂಡಿಕೆ ಮಾಡುತ್ತದೆ? ಇಲ್ಲಿದೆ ಮಾಹಿತಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,420 ರುಪಾಯಿ
  • ಮಲೇಷ್ಯಾ: 583 ರಿಂಗಿಟ್ (13,677 ರುಪಾಯಿ)
  • ದುಬೈ: 522.25 ಡಿರಾಮ್ (13,597 ರುಪಾಯಿ)
  • ಅಮೆರಿಕ: 143 ಡಾಲರ್ (13,676 ರುಪಾಯಿ)
  • ಸಿಂಗಾಪುರ: 189 ಸಿಂಗಾಪುರ್ ಡಾಲರ್ (14,158 ರುಪಾಯಿ)
  • ಕತಾರ್: 521 ಕತಾರಿ ರಿಯಾಲ್ (13,668 ರೂ)
  • ಸೌದಿ ಅರೇಬಿಯಾ: 536 ಸೌದಿ ರಿಯಾಲ್ (13,650 ರುಪಾಯಿ)
  • ಓಮನ್: 55.45 ಒಮಾನಿ ರಿಯಾಲ್ (13,925 ರುಪಾಯಿ)
  • ಕುವೇತ್: 43.17 ಕುವೇತಿ ದಿನಾರ್ (13,433 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us