AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 24 Aug: 15,000 ಕೋಟಿ ರೂ ದಾಟಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 24 August 2026: ಇವತ್ತು ಸೋಮವಾರ ಚಿನ್ನದ ಬೆಲೆ ಏರಿಕೆಯಾದರೆ, ಬೆಳ್ಳಿ ಬೆಲೆ ಸ್ಥಿರವಾಗಿದೆ. ಬಂಗಾರದ ದರ ಗ್ರಾಮ್​ಗೆ 80 ರೂ ಹಿಗ್ಗಿದೆ. ಆಭರಣ ಚಿನ್ನದ ಬೆಲೆ 14,950 ರಿಂದ 15,030 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,397 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rates 24 Aug: 15,000 ಕೋಟಿ ರೂ ದಾಟಿದ ಆಭರಣ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 24, 2026 | 11:19 AM

Share

ಮುಖ್ಯಾಂಶಗಳು

  • ಬಂಗಾರದ ದರ ಗ್ರಾಮ್​ಗೆ 80 ರೂ ಹಿಗ್ಗಿದೆ.
  • ಆಭರಣ ಚಿನ್ನದ ಬೆಲೆ 14,950 ರಿಂದ 15,030 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ.

ನವದೆಹಲಿ, ಆಗಸ್ಟ್ 24: ಕಳೆದ ಮೂರ್ನಾಲ್ಕು ದಿನಗಳಲ್ಲಿ 750 ರೂಗಳಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಸೋಮವಾರವೂ ಹೆಚ್ಚಿದೆ. ಇಂದು ಅದರ ಒಂದು ಗ್ರಾಮ್ ಬೆಲೆ 80 ರೂ ಜಾಸ್ತಿಗೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ಬೆಲೆ (Spot gold price) ಒಂದು ಡಾಲರ್ ಏರಿದೆ. ನಿನ್ನೆ ಎರಡು ಡಾಲರ್ ಹೆಚ್ಚಿತ್ತು. ಈಗ ಒಂದು ಗ್ರಾಮ್ ಸ್ಪಾಟ್ ಗೋಲ್ಡ್ ಬೆಲೆ 149 ಡಾಲರ್ ದಾಟಿದೆ. ಆದರೆ, ಹೆಚ್ಚಿನ ದೇಶಗಳಲ್ಲಿ ಬಂಗಾರದ ದರದಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,50,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,63,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,50,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,397
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,030
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,293
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,030 ರೂ
  • ಚೆನ್ನೈ: 15,030 ರೂ
  • ಮುಂಬೈ: 15,030 ರೂ
  • ದೆಹಲಿ: 15,045
  • ಕೋಲ್ಕತಾ: 15,030 ರೂ
  • ಕೇರಳ: 15,030 ರೂ
  • ಅಹ್ಮದಾಬಾದ್: 15,035 ರೂ
  • ಜೈಪುರ್: 15,045
  • ಲಕ್ನೋ: 15,045
  • ಭುವನೇಶ್ವರ್: 15,030 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 149.13 ಡಾಲರ್ (14,267 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.214 ಡಾಲರ್ (211 ರುಪಾಯಿ)

ಇದನ್ನೂ ಓದಿ: ಫಿಕ್ಸೆಡ್ ಡೆಪಾಸಿಟ್; ವಯಸ್ಸಿಗೆ ಅನುಗುಣವಾಗಿ ಠೇವಣಿ ಹೂಡಿಕೆ ನಿಯಮಗಳು; ಅವಿವಾಹಿತರು, ವಿವಾಹಿತರು, ನಿವೃತ್ತರು ಏನು ಮಾಡಬೇಕು?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 16,397 ರುಪಾಯಿ
  • ಮಲೇಷ್ಯಾ: 615 ರಿಂಗಿಟ್ (14,564 ರುಪಾಯಿ)
  • ದುಬೈ: 544.75 ಡಿರಾಮ್ (14,448 ರುಪಾಯಿ)
  • ಅಮೆರಿಕ: 151.50 ಡಾಲರ್ (14,494 ರುಪಾಯಿ)
  • ಸಿಂಗಾಪುರ: 201.50 ಸಿಂಗಾಪುರ್ ಡಾಲರ್ (15,185 ರುಪಾಯಿ)
  • ಕತಾರ್: 554 ಕತಾರಿ ರಿಯಾಲ್ (14,540 ರೂ)
  • ಸೌದಿ ಅರೇಬಿಯಾ: 571 ಸೌದಿ ರಿಯಾಲ್ (14,549 ರುಪಾಯಿ)
  • ಓಮನ್: 58.90 ಒಮಾನಿ ರಿಯಾಲ್ (14,637 ರುಪಾಯಿ)
  • ಕುವೇತ್: 45.87 ಕುವೇತಿ ದಿನಾರ್ (14,306 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Mon, 24 August 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್