Gold Rate: ಸತತ ಏರಿಕೆ ಬಳಿಕ ಶುಕ್ರವಾರ ಭರ್ಜರಿ ಕುಸಿತ ಕಂಡ ಚಿನ್ನದ ಬೆಲೆ

Gold Price 24 July 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ಇಳಿಕೆ ಕಂಡಿವೆ. ಬಂಗಾರದ ದರ ಗ್ರಾಮ್​​ಗೆ 270 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,500 ರೂನಿಂದ 13,230 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 14,433 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rate: ಸತತ ಏರಿಕೆ ಬಳಿಕ ಶುಕ್ರವಾರ ಭರ್ಜರಿ ಕುಸಿತ ಕಂಡ ಚಿನ್ನದ ಬೆಲೆ
ಚಿನ್ನ
Image Credit source: PTI

Updated on: Jul 24, 2026 | 11:10 AM

ಮುಖ್ಯಾಂಶಗಳು

  • ಬಂಗಾರದ ದರ ಗ್ರಾಮ್​​ಗೆ 270 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ.
  • ಆಭರಣ ಚಿನ್ನದ ಬೆಲೆ 13,500 ರೂನಿಂದ 13,230 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಇಳಿದಿದೆ.

ನವದೆಹಲಿ, ಜುಲೈ 24: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರುತ್ತಾ ಬಂದಿದ್ದ ಚಿನ್ನದ ಬೆಲೆ (Gold Price) ಇವತ್ತು ಶುಕ್ರವಾರ ಒಮ್ಮೆಲೇ ಕುಸಿದಿದೆ. ಇಂದು ಇದರ ದರ ಗ್ರಾಮ್​ಗೆ 270 ರೂನಷ್ಟು ಇಳಿದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯೂ ಇವತ್ತು ಐದು ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,825 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,230 ರೂ
  • ಚೆನ್ನೈ: 13,230 ರೂ
  • ಮುಂಬೈ: 13,230 ರೂ
  • ದೆಹಲಿ: 13,245 ರೂ
  • ಕೋಲ್ಕತಾ: 13,230 ರೂ
  • ಕೇರಳ: 13,230 ರೂ
  • ಅಹ್ಮದಾಬಾದ್: 13,235 ರೂ
  • ಜೈಪುರ್: 13,245 ರೂ
  • ಲಕ್ನೋ: 13,245 ರೂ
  • ಭುವನೇಶ್ವರ್: 13,230 ರೂ

ಇದನ್ನೂ ಓದಿ: ಮುಂಗಾರು ಕಾಲದಲ್ಲಿ ಎಸಿಯಿಂದ ಮೈ ಜಿಗುಟು ಅನಿಸುತ್ತಾ? ವಿದ್ಯುತ್ ಉಳಿಸಲು, ಕೂಲಿಂಗ್ ಪಡೆಯಲು ಡ್ರೈ ಮೋಡ್ ಟ್ರಿಕ್ಸ್ ಬಳಸಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 556 ರಿಂಗಿಟ್ (13,110 ರುಪಾಯಿ)
  • ದುಬೈ: 487.50 ಡಿರಾಮ್ (12,814 ರುಪಾಯಿ)
  • ಅಮೆರಿಕ: 133.50 ಡಾಲರ್ (12,887 ರುಪಾಯಿ)
  • ಸಿಂಗಾಪುರ: 179.90 ಸಿಂಗಾಪುರ್ ಡಾಲರ್ (13,441 ರುಪಾಯಿ)
  • ಕತಾರ್: 490.50 ಕತಾರಿ ರಿಯಾಲ್ (12,988 ರೂ)
  • ಸೌದಿ ಅರೇಬಿಯಾ: 503 ಸೌದಿ ರಿಯಾಲ್ (12,935 ರುಪಾಯಿ)
  • ಓಮನ್: 51.80 ಒಮಾನಿ ರಿಯಾಲ್ (12,986 ರುಪಾಯಿ)
  • ಕುವೇತ್: 40.90 ಕುವೇತಿ ದಿನಾರ್ (12,827 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:06 am, Fri, 24 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us