Gold Rates 24 September: 14,000 ರೂ ಒಳಗೆ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 24 September 2026: ಗುರುವಾರ ಚಿನ್ನ, ಬೆಳ್ಳಿ ಬೆಲೆಗಳೆರಡೂ ತಗ್ಗಿವೆ. ಚಿನ್ನದ ಬೆಲೆ 140 ರೂ, ಬೆಳ್ಳಿ ಬೆಲೆ 5 ರೂ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 14,135 ರೂನಿಂದ 13,995 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,268 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 24 September: 14,000 ರೂ ಒಳಗೆ ಇಳಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Sep 24, 2026 | 11:04 AM

ನವದೆಹಲಿ, ಸೆಪ್ಟೆಂಬರ್ 24: ಬಂಗಾರದ ದರ ಗುರುವಾರ ಭರ್ಜರಿ ಇಳಿಕೆ ಕಂಡಿದೆ. ಗ್ರಾಮ್​ಗೆ 140 ರೂ ಕಡಿಮೆಗೊಂಡಿದ್ದು, ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಯಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 5 ರೂ ತಗ್ಗಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,680 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 24ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,268
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,995
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,451
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,995 ರೂ
  • ಚೆನ್ನೈ: 13,995 ರೂ
  • ಮುಂಬೈ: 13,995 ರೂ
  • ದೆಹಲಿ: 14,010
  • ಕೋಲ್ಕತಾ: 13,995 ರೂ
  • ಕೇರಳ: 13,995 ರೂ
  • ಅಹ್ಮದಾಬಾದ್: 14,000 ರೂ
  • ಜೈಪುರ್: 14,010
  • ಲಕ್ನೋ: 14,010
  • ಭುವನೇಶ್ವರ್: 13,995 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 137. 9 ಡಾಲರ್ (13,222 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.063 ಡಾಲರ್ (197 ರುಪಾಯಿ)

ಇದನ್ನೂ ಓದಿ: ಹುರುನ್ ಇಂಡಿಯಾ ರಿಚ್ ಲಿಸ್ಟ್ 2026: ಮುಕೇಶ್ ಅಂಬಾನಿ ಹಿಂದಿಕ್ಕಿ ಮೊದಲ ಸ್ಥಾನ ಪಡೆದ ಗೌತಮ್ ಅದಾನಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,268 ರುಪಾಯಿ
  • ಮಲೇಷ್ಯಾ: 579 ರಿಂಗಿಟ್ (13,592 ರುಪಾಯಿ)
  • ದುಬೈ: 516.25 ಡಿರಾಮ್ (13,471 ರುಪಾಯಿ)
  • ಅಮೆರಿಕ: 141.50 ಡಾಲರ್ (13,582 ರುಪಾಯಿ)
  • ಸಿಂಗಾಪುರ: 188.70 ಸಿಂಗಾಪುರ್ ಡಾಲರ್ (14,129 ರುಪಾಯಿ)
  • ಕತಾರ್: 517 ಕತಾರಿ ರಿಯಾಲ್ (13,594 ರೂ)
  • ಸೌದಿ ಅರೇಬಿಯಾ: 532 ಸೌದಿ ರಿಯಾಲ್ (13,579 ರುಪಾಯಿ)
  • ಓಮನ್: 54.80 ಒಮಾನಿ ರಿಯಾಲ್ (13,642 ರುಪಾಯಿ)
  • ಕುವೇತ್: 43.17 ಕುವೇತಿ ದಿನಾರ್ (13,455 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us