AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಬಂಗಾರದ ಬೆಲೆ ಎರಡು ದಿನದಲ್ಲಿ 100 ರೂ ಇಳಿಕೆ

Gold Price 27 May 2026: ಚಿನ್ನದ ಬೆಲೆ ಎರಡು ದಿನದಲ್ಲಿ 100 ರೂ ಕಡಿಮೆ ಆಗಿದೆ. ಬುಧವಾರ ಇದರ ಬೆಲೆಯಲ್ಲಿ 55 ರೂ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,565 ರೂನಿಂದ 15,510 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,889 ರೂನಿಂದ 15,829 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 285 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 295 ರೂ ಇದೆ.

Gold Rate: ಬಂಗಾರದ ಬೆಲೆ ಎರಡು ದಿನದಲ್ಲಿ 100 ರೂ ಇಳಿಕೆ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 27, 2026 | 1:29 PM

Share

ನವದೆಹಲಿ, ಮೇ 27: ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,58,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,45,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 27ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,872 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,829 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,510 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 285 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,510 ರೂ
  • ಚೆನ್ನೈ: 14,650 ರೂ
  • ಮುಂಬೈ: 14,510 ರೂ
  • ದೆಹಲಿ: 14,625 ರೂ
  • ಕೋಲ್ಕತಾ: 14,510 ರೂ
  • ಕೇರಳ: 14,510 ರೂ
  • ಅಹ್ಮದಾಬಾದ್: 14,515 ರೂ
  • ಜೈಪುರ್: 14,525 ರೂ
  • ಲಕ್ನೋ: 14,525 ರೂ
  • ಭುವನೇಶ್ವರ್: 14,510 ರೂ

ಇದನ್ನೂ ಓದಿ: ಎಐನಿಂದ ಸದ್ಯದಲ್ಲೇ ಮನುಷ್ಯರಿಗೆ ಕೆಲಸ ಇಲ್ಲವಾಗುತ್ತೆ ಎನ್ನುತ್ತಿದ್ದ ಸ್ಯಾಮ್ ಆಲ್ಟ್​ಮ್ಯಾನ್ ಬಾಯಿಂದ ಈಗ ಬೇರೆಯೇ ಮಾತು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 590 ರಿಂಗಿಟ್ (14,246 ರುಪಾಯಿ)
  • ದುಬೈ: 543.75 ಡಿರಾಮ್ (14,176 ರುಪಾಯಿ)
  • ಅಮೆರಿಕ: 148.50 ಡಾಲರ್ (14,199 ರುಪಾಯಿ)
  • ಸಿಂಗಾಪುರ: 196.10 ಸಿಂಗಾಪುರ್ ಡಾಲರ್ (14,713 ರುಪಾಯಿ)
  • ಕತಾರ್: 544.50 ಕತಾರಿ ರಿಯಾಲ್ (14,310 ರೂ)
  • ಸೌದಿ ಅರೇಬಿಯಾ: 560 ಸೌದಿ ರಿಯಾಲ್ (14,295 ರುಪಾಯಿ)
  • ಓಮನ್: 57.20 ಒಮಾನಿ ರಿಯಾಲ್ (14,225 ರುಪಾಯಿ)
  • ಕುವೇತ್: 45.33 ಕುವೇತಿ ದಿನಾರ್ (14,158 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 285 ರೂ
  • ಚೆನ್ನೈ: 295 ರೂ
  • ಮುಂಬೈ: 285 ರೂ
  • ದೆಹಲಿ: 285 ರೂ
  • ಕೋಲ್ಕತಾ: 285 ರೂ
  • ಕೇರಳ: 295 ರೂ
  • ಅಹ್ಮದಾಬಾದ್: 285 ರೂ
  • ಜೈಪುರ್: 285 ರೂ
  • ಲಕ್ನೋ: 285 ರೂ
  • ಭುವನೇಶ್ವರ್: 295 ರೂ
  • ಪುಣೆ: 285

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us