AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 28 Aug: ಚಿನ್ನದ ಬೆಲೆ ಭರ್ಜರಿ ಇಳಿಕೆ; ಗ್ರಾಮ್​ಗೆ 290 ರೂಗಳಷ್ಟು ತಗ್ಗಿದ ಬಂಗಾರದ ದರ

Gold Price 28 August 2026: ಚಿನ್ನ, ಬೆಳ್ಳಿ ಬೆಲೆಗಳೆರಡೂ ಶುಕ್ರವಾರ ಇಳಿಕೆಯಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 290 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,940 ರೂನಿಂದ 14,650 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,982 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 28 Aug: ಚಿನ್ನದ ಬೆಲೆ ಭರ್ಜರಿ ಇಳಿಕೆ; ಗ್ರಾಮ್​ಗೆ 290 ರೂಗಳಷ್ಟು ತಗ್ಗಿದ ಬಂಗಾರದ ದರ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 28, 2026 | 10:51 AM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ ಗ್ರಾಮ್​ಗೆ 290 ರೂ, ಬೆಳ್ಳಿ ಬೆಲೆ 5 ರೂ ಇಳಿದಿದೆ.
  • ಆಭರಣ ಚಿನ್ನದ ಬೆಲೆ 14,940 ರೂನಿಂದ 14,650 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ.

ನವದೆಹಲಿ, ಆಗಸ್ಟ್ 28: ಚಿನ್ನದ ಬೆಲೆ ಸತತ ಎರಡನೇ ಬಾರಿ ಇಳಿದಿದೆ. ನಿನ್ನೆ 70 ರೂ ಇಳಿದಿದ್ದ ಬಂಗಾರದ ದರ (Gold Price) ಇವತ್ತು ಬರೋಬ್ಬರಿ 290 ರೂಗಳಷ್ಟು ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ ಮತ್ತೆ 16,000 ರೂ ಗಡಿಯೊಳಗೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ಗಡಿಯೊಳಗೆ ಇಳಿದಿದೆ. ವಿದೇಶಗಳಲ್ಲಿ ಬೆಲೆಯಲ್ಲಿ ಏರಿಳಿತಗಳಿವೆ. ಸ್ಪಾಟ್ ಗೋಲ್ಡ್ ಬೆಲೆಯಲ್ಲೂ ಇಳಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಭಾರತದಲ್ಲಿ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,982
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,650
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,987
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,650 ರೂ
  • ಚೆನ್ನೈ: 14,650 ರೂ
  • ಮುಂಬೈ: 14,650 ರೂ
  • ದೆಹಲಿ: 14,665
  • ಕೋಲ್ಕತಾ: 14,650 ರೂ
  • ಕೇರಳ: 14,650 ರೂ
  • ಅಹ್ಮದಾಬಾದ್: 14,655 ರೂ
  • ಜೈಪುರ್: 14,665
  • ಲಕ್ನೋ: 14,665
  • ಭುವನೇಶ್ವರ್: 14,650 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 147.38 ಡಾಲರ್ (14,080 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.217 ಡಾಲರ್ (211 ರುಪಾಯಿ)

ಇದನ್ನೂ ಓದಿ: ಚಿನ್ನ, ಬೆಳ್ಳಿಗೆ ಆಮದು ಸುಂಕ ಇಳಿಸಲು ಸರ್ಕಾರ ಸಜ್ಜು; ಗ್ರಾಮ್​ಗೆ 1,300 ರೂನಷ್ಟು ಕುಸಿಯುತ್ತಾ ಬಂಗಾರದ ದರ?

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,982 ರುಪಾಯಿ
  • ಮಲೇಷ್ಯಾ: 609 ರಿಂಗಿಟ್ (14,449 ರುಪಾಯಿ)
  • ದುಬೈ: 554.50 ಡಿರಾಮ್ (14,401 ರುಪಾಯಿ)
  • ಅಮೆರಿಕ: 151.50 ಡಾಲರ್ (14,476 ರುಪಾಯಿ)
  • ಸಿಂಗಾಪುರ: 199 ಸಿಂಗಾಪುರ್ ಡಾಲರ್ (14,965 ರುಪಾಯಿ)
  • ಕತಾರ್: 552 ಕತಾರಿ ರಿಯಾಲ್ (14,469 ರೂ)
  • ಸೌದಿ ಅರೇಬಿಯಾ: 569 ಸೌದಿ ರಿಯಾಲ್ (14,480 ರುಪಾಯಿ)
  • ಓಮನ್: 58.80 ಒಮಾನಿ ರಿಯಾಲ್ (14,593 ರುಪಾಯಿ)
  • ಕುವೇತ್: 45.87 ಕುವೇತಿ ದಿನಾರ್ (14,283 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:48 am, Fri, 28 August 26

Follow Us
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!