Gold Rate: ಚಿನ್ನದ ಬೆಲೆ ಒಂದು ಗ್ರಾಮ್​ಗೆ 205 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 28 May 2026: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಗುರುವಾರ ಇಳಿಕೆ ಆಗಿವೆ. ಚಿನ್ನದ ಬೆಲೆ 205 ರೂ, ಬೆಳ್ಳಿ ಬೆಲೆ 10 ರೂ ಕಡಿಮೆಗೊಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 14,510 ರೂನಿಂದ 14,305 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,606 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 275 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 285 ರೂ ಇದೆ.

Gold Rate: ಚಿನ್ನದ ಬೆಲೆ ಒಂದು ಗ್ರಾಮ್​ಗೆ 205 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: May 28, 2026 | 10:54 AM

ನವದೆಹಲಿ, ಮೇ 28: ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗುತ್ತಿದೆ. ಬೆಳ್ಳಿ ಬೆಲೆಯೂ ಕಳೆದ ಏಳೆಂಟು ದಿನದಲ್ಲಿ ಮೊದಲ ಬಾರಿ ಇಳಿದಿದೆ. ಬಂಗಾರದ ದರ (Gold Rate) ಒಂದು ಗ್ರಾಮ್​ಗೆ 200 ರೂಗಿಂತ ಹೆಚ್ಚಿನ ಮೊತ್ತದಷ್ಟು ಇಳಿಕೆಯಾಗಿದೆ. ಹಿಂದಿನ ಎರಡು ದಿನದಲ್ಲಿ 100 ರೂ ಬೆಲೆ ತಗ್ಗಿತ್ತು. ಭಾರತದಲ್ಲಿಯಷ್ಟೇ ಅಲ್ಲ ಬಹುತೇಕ ದೇಶಗಳ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 28ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,606 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,305 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,704 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,606 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,305 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,305 ರೂ
  • ಚೆನ್ನೈ: 14,500 ರೂ
  • ಮುಂಬೈ: 14,305 ರೂ
  • ದೆಹಲಿ: 14,320 ರೂ
  • ಕೋಲ್ಕತಾ: 14,305 ರೂ
  • ಕೇರಳ: 14,305 ರೂ
  • ಅಹ್ಮದಾಬಾದ್: 14,310 ರೂ
  • ಜೈಪುರ್: 14,320 ರೂ
  • ಲಕ್ನೋ: 14,320 ರೂ
  • ಭುವನೇಶ್ವರ್: 14,305 ರೂ

ಇದನ್ನೂ ಓದಿ: ಷೇರುಬಜಾರಲ್ಲಿ ಅದಾನಿ ಪವರ್ ಅಬ್ಬರ; ಮಾರುಕಟ್ಟೆ ಮೌಲ್ಯದಲ್ಲಿ ಇನ್ಫೋಸಿಸ್ ಹಿಂದಿಕ್ಕಿದ್ದು ಹೇಗೆ?

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 579 ರಿಂಗಿಟ್ (14,004 ರುಪಾಯಿ)
  • ದುಬೈ: 537 ಡಿರಾಮ್ (14,075 ರುಪಾಯಿ)
  • ಅಮೆರಿಕ: 146 ಡಾಲರ್ (14,054 ರುಪಾಯಿ)
  • ಸಿಂಗಾಪುರ: 193.50 ಸಿಂಗಾಪುರ್ ಡಾಲರ್ (14,546 ರುಪಾಯಿ)
  • ಕತಾರ್: 535.50 ಕತಾರಿ ರಿಯಾಲ್ (14,143 ರೂ)
  • ಸೌದಿ ಅರೇಬಿಯಾ: 560 ಸೌದಿ ರಿಯಾಲ್ (14,365 ರುಪಾಯಿ)
  • ಓಮನ್: 56.45 ಒಮಾನಿ ರಿಯಾಲ್ (14,113 ರುಪಾಯಿ)
  • ಕುವೇತ್: 44.68 ಕುವೇತಿ ದಿನಾರ್ (14,023 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 285 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 285 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us