Gold Rate: ವಾರಾಂತ್ಯದಲ್ಲಿ ತಗ್ಗಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

Gold Price 31 May 2026: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ 55 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಹೊಂದಿದೆ. 22 ಕ್ಯಾರಟ್ ಚಿನ್ನದ ಬೆಲೆ 14,450 ರೂನಿಂದ 14,395 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,764 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.

Gold Rate: ವಾರಾಂತ್ಯದಲ್ಲಿ ತಗ್ಗಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Shutterstock

Updated on: May 31, 2026 | 10:32 AM

ನವದೆಹಲಿ, ಮೇ 31: ಚಿನ್ನದ ಬೆಲೆ (Gold Rate) ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಈ ವಾರದ ಬಹುತೇಕ ದಿನ ಇಳಿಕೆಯಾಗಿದ್ದ ಚಿನ್ನದ ಬೆಲೆ ಶುಕ್ರವಾರ 145 ರೂಗಳಷ್ಟು ಹೆಚ್ಚಳಗೊಂಡಿತ್ತು. ಈಗ ವಾರಾಂತ್ಯದಲ್ಲಿ 55 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಿದೆ. ಇನ್ನು, ಬೆಳ್ಳಿ ಬೆಲೆ ಮತ್ತೊಮ್ಮೆ ಯಾವ ಬದಲಾವಣೆ ಇಲ್ಲದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,44,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,57,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,44,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 31ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,778 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,704 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,395 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,395 ರೂ
  • ಚೆನ್ನೈ: 14,630 ರೂ
  • ಮುಂಬೈ: 14,395 ರೂ
  • ದೆಹಲಿ: 14,410 ರೂ
  • ಕೋಲ್ಕತಾ: 14,395 ರೂ
  • ಕೇರಳ: 14,395 ರೂ
  • ಅಹ್ಮದಾಬಾದ್: 14,400 ರೂ
  • ಜೈಪುರ್: 14,410 ರೂ
  • ಲಕ್ನೋ: 14,410 ರೂ
  • ಭುವನೇಶ್ವರ್: 14,395 ರೂ

ಇದನ್ನೂ ಓದಿ: ಚಿನ್ನಕ್ಕಿಂತಲೂ ಬಿಟ್​ಕಾಯಿನ್ ಒಂದು ಕೈ ಮೇಲೆ ಎನ್ನುತ್ತಿದ್ದ ಮಾರ್ಕ್ ಕ್ಯೂಬನ್ ಈಗ ಕೈಚೆಲ್ಲಿ ಕೂತ ಕಥೆ..!

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 589 ರಿಂಗಿಟ್ (14,110 ರುಪಾಯಿ)
  • ದುಬೈ: 550 ಡಿರಾಮ್ (14,220 ರುಪಾಯಿ)
  • ಅಮೆರಿಕ: 151 ಡಾಲರ್ (14,340 ರುಪಾಯಿ)
  • ಸಿಂಗಾಪುರ: 197.60 ಸಿಂಗಾಪುರ್ ಡಾಲರ್ (14,698 ರುಪಾಯಿ)
  • ಕತಾರ್: 551 ಕತಾರಿ ರಿಯಾಲ್ (14,356 ರೂ)
  • ಸೌದಿ ಅರೇಬಿಯಾ: 566 ಸೌದಿ ರಿಯಾಲ್ (14,323 ರುಪಾಯಿ)
  • ಓಮನ್: 58.20 ಒಮಾನಿ ರಿಯಾಲ್ (14,355 ರುಪಾಯಿ)
  • ಕುವೇತ್: 46.34 ಕುವೇತಿ ದಿನಾರ್ (14,221 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us