Gold Rates 04 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 4 August 2026: ಚಿನ್ನದ ಬೆಲೆ ಇಂದು ಮಂಗಳವಾರ 20 ರೂಗಳಷ್ಟು ಅಲ್ಪ ಇಳಿಕೆ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,220 ರೂನಿಂದ 13,200 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,400 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 235 ರೂ ಇದೆ.

Gold Rates 04 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Aug 04, 2026 | 1:27 PM

ಮುಖ್ಯಾಂಶಗಳು

  • ಚಿನ್ನದ ಬೆಲೆ ಇಂದು ಮಂಗಳವಾರ 20 ರೂಗಳಷ್ಟು ಅಲ್ಪ ಇಳಿಕೆ ಕಂಡಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,220 ರೂನಿಂದ 13,200 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಇಳಿದಿದೆ.

ನವದೆಹಲಿ, ಆಗಸ್ಟ್ 4: ಚಿನ್ನದ ಬೆಲೆ ಇವತ್ತು ಮಂಗಳವಾರ ಅಲ್ಪ ಇಳಿಕೆ ಕಂಡಿದೆ. ಹಳದಿ ಲೋಹದ ಬೆಲೆ (Gold Price) ಗ್ರಾಮ್​ಗೆ 20-22 ರೂಗಳಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಅಲ್ಪ ಏರಿಕೆಯಾದರೆ, ಇನ್ನೂ ಕೆಲವೆಡೆ ತುಸು ತಗ್ಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,400 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,200 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,800 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,400 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,200 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,200 ರೂ
  • ಚೆನ್ನೈ: 13,200 ರೂ
  • ಮುಂಬೈ: 13,200 ರೂ
  • ದೆಹಲಿ: 13,215 ರೂ
  • ಕೋಲ್ಕತಾ: 13,200 ರೂ
  • ಕೇರಳ: 13,200 ರೂ
  • ಅಹ್ಮದಾಬಾದ್: 13,205 ರೂ
  • ಜೈಪುರ್: 13,215 ರೂ
  • ಲಕ್ನೋ: 13,215 ರೂ
  • ಭುವನೇಶ್ವರ್: 13,200 ರೂ

ಇದನ್ನೂ ಓದಿ: ಆರ್​ಬಿಐ ಹೊಸ ಮಾರ್ಗಸೂಚಿ; ಅ. 1ರಿಂದ ಬದಲಾಗಲಿವೆ ಬ್ಯಾಂಕ್ ಡೆಪಾಸಿಟ್ ನಿಯಮಗಳು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 547 ರಿಂಗಿಟ್ (12,733 ರುಪಾಯಿ)
  • ದುಬೈ: 485.50 ಡಿರಾಮ್ (12,602 ರುಪಾಯಿ)
  • ಅಮೆರಿಕ: 133 ಡಾಲರ್ (12,679 ರುಪಾಯಿ)
  • ಸಿಂಗಾಪುರ: 177.60 ಸಿಂಗಾಪುರ್ ಡಾಲರ್ (13,210 ರುಪಾಯಿ)
  • ಕತಾರ್: 487.50 ಕತಾರಿ ರಿಯಾಲ್ (12,766 ರೂ)
  • ಸೌದಿ ಅರೇಬಿಯಾ: 501 ಸೌದಿ ರಿಯಾಲ್ (12,733 ರುಪಾಯಿ)
  • ಓಮನ್: 51.85 ಒಮಾನಿ ರಿಯಾಲ್ (12,856 ರುಪಾಯಿ)
  • ಕುವೇತ್: 41.10 ಕುವೇತಿ ದಿನಾರ್ (12,692 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 235 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 235 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Tue, 4 August 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us