Gold Rates 05 Aug: ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ದುಬಾರಿ

Gold Price 5 August 2026: ಚಿನ್ನದ ಬೆಲೆ ಬುಧವಾರ ಗ್ರಾಮ್​ಗೆ 160 ರೂ ಏರಿದೆ. ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. ಆಭರಣ ಚಿನ್ನದ ಬೆಲೆ 13,200 ರೂನಿಂದ 13,360 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,575 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ. ಚೆನ್ನೈ ಮೊದಲಾದೆಡೆಯೂ ಬೆಲೆ 240 ರೂ ಇದೆ.

Gold Rates 05 Aug: ಚಿನ್ನದ ಬೆಲೆ ಭರ್ಜರಿ ಏರಿಕೆ; ಬೆಳ್ಳಿಯೂ ದುಬಾರಿ
ಚಿನ್ನ
Image Credit source: PTI

Updated on: Aug 05, 2026 | 12:35 PM

ಮುಖ್ಯಾಂಶಗಳು

  • ಚಿನ್ನದ ಬೆಲೆ ಬುಧವಾರ ಗ್ರಾಮ್​ಗೆ 160 ರೂ ಏರಿದೆ. ಬೆಳ್ಳಿ ಬೆಲೆ 5 ರೂ ಹೆಚ್ಚಿದೆ.
  • ಆಭರಣ ಚಿನ್ನದ ಬೆಲೆ 13,200 ರೂನಿಂದ 13,360 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 240 ರೂಗೆ ಏರಿದೆ.

ನವದೆಹಲಿ, ಆಗಸ್ಟ್ 5: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಎರಡೂ ಕೂಡ ಇಂದು ಬುಧವಾರ ಹೆಚ್ಚಳವಾಗಿವೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ 160 ರೂ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಬೆಳ್ಳಿ ಬೆಲೆ ಇಂದು ಐದು ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,33,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 5ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,575 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,360 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,931 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,575 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,360 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 240 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,360 ರೂ
  • ಚೆನ್ನೈ: 13,360 ರೂ
  • ಮುಂಬೈ: 13,360 ರೂ
  • ದೆಹಲಿ: 13,375 ರೂ
  • ಕೋಲ್ಕತಾ: 13,360 ರೂ
  • ಕೇರಳ: 13,360 ರೂ
  • ಅಹ್ಮದಾಬಾದ್: 13,365 ರೂ
  • ಜೈಪುರ್: 13,375 ರೂ
  • ಲಕ್ನೋ: 13,375 ರೂ
  • ಭುವನೇಶ್ವರ್: 13,360 ರೂ

ಇದನ್ನೂ ಓದಿ: ರೆಪೋ ದರ ಯಥಾಸ್ಥಿತಿ, ತಟಸ್ಥ ನೀತಿ; ಜಿಡಿಪಿ ಶೇ. 6.7, ಹಣದುಬ್ಬರ ಶೇ. 5; ಇದು ಆರ್​ಬಿಐ ಎಂಪಿಸಿ ಸಭೆ ಮುಖ್ಯಾಂಶಗಳು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 551 ರಿಂಗಿಟ್ (12,792 ರುಪಾಯಿ)
  • ದುಬೈ: 492.25 ಡಿರಾಮ್ (12,744 ರುಪಾಯಿ)
  • ಅಮೆರಿಕ: 134.50 ಡಾಲರ್ (12,792 ರುಪಾಯಿ)
  • ಸಿಂಗಾಪುರ: 181 ಸಿಂಗಾಪುರ್ ಡಾಲರ್ (13,432 ರುಪಾಯಿ)
  • ಕತಾರ್: 493 ಕತಾರಿ ರಿಯಾಲ್ (12,862 ರೂ)
  • ಸೌದಿ ಅರೇಬಿಯಾ: 505 ಸೌದಿ ರಿಯಾಲ್ (12,789 ರುಪಾಯಿ)
  • ಓಮನ್: 52.35 ಒಮಾನಿ ರಿಯಾಲ್ (12,932 ರುಪಾಯಿ)
  • ಕುವೇತ್: 41.23 ಕುವೇತಿ ದಿನಾರ್ (12,769 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 240 ರೂ
  • ಚೆನ್ನೈ: 240 ರೂ
  • ಮುಂಬೈ: 240 ರೂ
  • ದೆಹಲಿ: 240 ರೂ
  • ಕೋಲ್ಕತಾ: 240 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 240 ರೂ
  • ಜೈಪುರ್: 240 ರೂ
  • ಲಕ್ನೋ: 240 ರೂ
  • ಭುವನೇಶ್ವರ್: 240 ರೂ
  • ಪುಣೆ: 240

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Wed, 5 August 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us