Gold Rates 7 October: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ

Gold Price 7 October 2026: ಚಿನ್ನದ ಬೆಲೆ ಇಂದು ಬುಧವಾರ ತುಸು ಏರಿಕೆಯಾಗಿದೆ. ಗ್ರಾಮ್​ಗೆ 50 ರೂ ಬೆಲೆ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,660 ರೂನಿಂದ 13,710 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,957 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 7 October: ಚಿನ್ನದ ಬೆಲೆ ತುಸು ಏರಿಕೆ; ಬೆಳ್ಳಿ ಬೆಲೆ ಯಥಾಸ್ಥಿತಿ
ಚಿನ್ನ
Image Credit source: PTI

Updated on: Oct 07, 2026 | 12:09 PM

ನವದೆಹಲಿ, ಅಕ್ಟೋಬರ್ 7: ಚಿನ್ನದ ಬೆಲೆ ತುಸು ಏರಿಕೆ ಕಂಡಿದೆ. ನಿನ್ನೆ 15 ರೂ ಇಳಿದಿದ್ದ ಇದರ ಬೆಲೆ ಇವತ್ತು 50 ರೂ ಹೆಚ್ಚಳವಾಗಿದೆ. ವಿದೇಶಗಳಲ್ಲೂ ಅನೇಕ ಕಡೆ ಬೆಲೆ ಅಲ್ಪ ಏರಿಕೆಯಾಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲೂ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,37,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 7ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,957
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,710
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,218
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,710 ರೂ
  • ಚೆನ್ನೈ: 13,710 ರೂ
  • ಮುಂಬೈ: 13,710 ರೂ
  • ದೆಹಲಿ: 13,725
  • ಕೋಲ್ಕತಾ: 13,710 ರೂ
  • ಕೇರಳ: 13,710 ರೂ
  • ಅಹ್ಮದಾಬಾದ್: 13,715 ರೂ
  • ಜೈಪುರ್: 13,725
  • ಲಕ್ನೋ: 13,725
  • ಭುವನೇಶ್ವರ್: 13,710 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 132.90 ಡಾಲರ್ (12,844 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.949 ಡಾಲರ್ (188 ರುಪಾಯಿ)

ಇದನ್ನೂ ಓದಿ: 2026-27ರಲ್ಲಿ ಜಿಡಿಪಿ ಶೇ. 7.1; ಹಣದುಬ್ಬರ ಶೇ. 5.2: ಆರ್​ಬಿಐ ಅಂದಾಜು

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,957 ರುಪಾಯಿ
  • ಮಲೇಷ್ಯಾ: 558 ರಿಂಗಿಟ್ (13,189 ರುಪಾಯಿ)
  • ದುಬೈ: 500.50 ಡಿರಾಮ್ (13,131 ರುಪಾಯಿ)
  • ಅಮೆರಿಕ: 137 ಡಾಲರ್ (13,217 ರುಪಾಯಿ)
  • ಸಿಂಗಾಪುರ: 181 ಸಿಂಗಾಪುರ್ ಡಾಲರ್ (13,653 ರುಪಾಯಿ)
  • ಕತಾರ್: 501 ಕತಾರಿ ರಿಯಾಲ್ (13,275 ರೂ)
  • ಸೌದಿ ಅರೇಬಿಯಾ: 515 ಸೌದಿ ರಿಯಾಲ್ (13,251 ರುಪಾಯಿ)
  • ಓಮನ್: 53.40 ಒಮಾನಿ ರಿಯಾಲ್ (13,396 ರುಪಾಯಿ)
  • ಕುವೇತ್: 41.69 ಕುವೇತಿ ದಿನಾರ್ (13,067 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us