AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 8 October: 22 ಕ್ಯಾರಟ್ ಚಿನ್ನದ ಬೆಲೆ 13,710 ರೂ; ಇಲ್ಲಿದೆ ದರಪಟ್ಟಿ

Gold Price 8 October 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಮಾತ್ರ ಬೆಲೆ ತಗ್ಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 13,710 ರೂ ಇದ್ದರೆ, ಅಪರಂಜಿ ಚಿನ್ನದ ಬೆಲೆ 14,957 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 245 ರೂ ಇದೆ.

Gold Rates 8 October: 22 ಕ್ಯಾರಟ್ ಚಿನ್ನದ ಬೆಲೆ 13,710 ರೂ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 08, 2026 | 2:01 PM

Share

ನವದೆಹಲಿ, ಅಕ್ಟೋಬರ್ 8: ಭಾರತದಲ್ಲಿ ಚಿನ್ನದ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದ್ದರೂ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಅಮೆರಿಕದಿಂದ ಹಿಡಿದು ಸಿಂಗಾಪುರದವರೆಗೆ ಅನೇಕ ದೇಶಗಳಲ್ಲಿ ಬಂಗಾರದ ದರ ತಗ್ಗಿದೆ. ಭಾರತದಲ್ಲಿ ನಿನ್ನೆಯ ದರವೇ ಮುಂದುವರಿದಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲೂ ಹೆಚ್ಚಿನ ವ್ಯತ್ಯಯಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,37,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,49,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,37,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,957
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,710
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,218
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,710 ರೂ
  • ಚೆನ್ನೈ: 13,710 ರೂ
  • ಮುಂಬೈ: 13,710 ರೂ
  • ದೆಹಲಿ: 13,725
  • ಕೋಲ್ಕತಾ: 13,710 ರೂ
  • ಕೇರಳ: 13,710 ರೂ
  • ಅಹ್ಮದಾಬಾದ್: 13,715 ರೂ
  • ಜೈಪುರ್: 13,725
  • ಲಕ್ನೋ: 13,725
  • ಭುವನೇಶ್ವರ್: 13,710 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 132.89 ಡಾಲರ್ (12,844 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.930 ಡಾಲರ್ (188 ರುಪಾಯಿ)

ಇದನ್ನೂ ಓದಿ: Amazon-Flipkart Sale: ಅಮೇಜನ್-ಫ್ಲಿಪ್​ಕಾರ್ಟ್​ನಲ್ಲಿ ಫೆಸ್ಟಿವಲ್ ಸೇಲ್ ಆರಂಭ: ಐಫೋನ್, ಲ್ಯಾಪ್‌ಟಾಪ್ ಮೇಲೆ ಭರ್ಜರಿ ಆಫರ್

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,957 ರುಪಾಯಿ
  • ಮಲೇಷ್ಯಾ: 559 ರಿಂಗಿಟ್ (13,231 ರುಪಾಯಿ)
  • ದುಬೈ: 494 ಡಿರಾಮ್ (13,017 ರುಪಾಯಿ)
  • ಅಮೆರಿಕ: 135.50 ಡಾಲರ್ (13,115 ರುಪಾಯಿ)
  • ಸಿಂಗಾಪುರ: 181 ಸಿಂಗಾಪುರ್ ಡಾಲರ್ (13,671 ರುಪಾಯಿ)
  • ಕತಾರ್: 495.50 ಕತಾರಿ ರಿಯಾಲ್ (13,157 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (13,122 ರುಪಾಯಿ)
  • ಓಮನ್: 52.60 ಒಮಾನಿ ರಿಯಾಲ್ (13,223 ರುಪಾಯಿ)
  • ಕುವೇತ್: 41.50 ಕುವೇತಿ ದಿನಾರ್ (13,035 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 245 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 245 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 245 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More