AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 8 September: ಚಿನ್ನದ ಬೆಲೆ 10 ಗ್ರಾಮ್​ಗೆ 1,100 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 8 September 2026: ಚಿನ್ನದ ಬೆಲೆ ಮಂಗಳವಾರ ಗ್ರಾಮ್​ಗೆ 110 ರೂ ಏರಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. 22 ಕ್ಯಾರಟ್ ಚಿನ್ನದ ಬೆಲೆ 14,130 ರೂನಿಂದ 14,240 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,530 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates 8 September: ಚಿನ್ನದ ಬೆಲೆ 10 ಗ್ರಾಮ್​ಗೆ 1,100 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2026 | 3:03 PM

Share

ನವದೆಹಲಿ, ಸೆಪ್ಟೆಂಬರ್ 8: ಕಳೆದ ಕೆಲ ದಿನಗಳಿಂದ ಒಂದು ಗ್ರಾಮ್​ಗೆ 230-250 ರೂವರೆಗೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 110 ರೂ ಏರಿದೆ. ಬೆಳ್ಳಿ ಬೆಲೆ ಇವತ್ತೂ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲೂ ಚಿನ್ನ, ಬೆಳ್ಳಿ ದರಗಳಲ್ಲಿ ಹೆಚ್ಚಿನ ವ್ಯತ್ಯಯಗಳಾತಿಲ್ಲ. ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳೂ ಬಹುತೇಕ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,535
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,240
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,651
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,240 ರೂ
  • ಚೆನ್ನೈ: 14,240 ರೂ
  • ಮುಂಬೈ: 14,240 ರೂ
  • ದೆಹಲಿ: 14,255
  • ಕೋಲ್ಕತಾ: 14,240 ರೂ
  • ಕೇರಳ: 14,240 ರೂ
  • ಅಹ್ಮದಾಬಾದ್: 14,245 ರೂ
  • ಜೈಪುರ್: 14,255
  • ಲಕ್ನೋ: 14,255
  • ಭುವನೇಶ್ವರ್: 14,240 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 141.23 ಡಾಲರ್ (13,344 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.116 ಡಾಲರ್ (200 ರುಪಾಯಿ)

ಇದನ್ನೂ ಓದಿ: ಗ್ರಾಮೀಣ ಭಾಗದಲ್ಲಿ ಎಲ್​ಪಿಜಿ ರೀಫಿಲ್ ಬುಕಿಂಗ್​ಗಳ ನಡುವಿನ ಅಂತರ 45 ರಿಂದ 25 ದಿನಗಳಿಗೆ ಇಳಿಕೆ; ದೇಶದೆಲ್ಲೆಡೆ ಏಕರೀತಿಯ ಬುಕಿಂಗ್ ನಿಯಮ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,535 ರುಪಾಯಿ
  • ಮಲೇಷ್ಯಾ: 591 ರಿಂಗಿಟ್ (13,807 ರುಪಾಯಿ)
  • ದುಬೈ: 530.75 ಡಿರಾಮ್ (13,691 ರುಪಾಯಿ)
  • ಅಮೆರಿಕ: 145.50 ಡಾಲರ್ (13,786 ರುಪಾಯಿ)
  • ಸಿಂಗಾಪುರ: 191 ಸಿಂಗಾಪುರ್ ಡಾಲರ್ (14,294 ರುಪಾಯಿ)
  • ಕತಾರ್: 530.50 ಕತಾರಿ ರಿಯಾಲ್ (13,804 ರೂ)
  • ಸೌದಿ ಅರೇಬಿಯಾ: 547 ಸೌದಿ ರಿಯಾಲ್ (13,801 ರುಪಾಯಿ)
  • ಓಮನ್: 56.50 ಒಮಾನಿ ರಿಯಾಲ್ (13,905 ರುಪಾಯಿ)
  • ಕುವೇತ್: 44.01 ಕುವೇತಿ ದಿನಾರ್ (13,590 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ