AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 09 Aug: ಹತ್ತು ಗ್ರಾಮ್ ಚಿನ್ನದ ಬೆಲೆ ಈ ವಾರ 7,650 ರೂ ಹೆಚ್ಚಳ

Gold Price 9 August 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ 225 ರೂ, ಬೆಳ್ಳಿ ಬೆಲೆ 5 ರೂ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 13,740 ರೂನಿಂದ 13,965 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,235 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 09 Aug: ಹತ್ತು ಗ್ರಾಮ್ ಚಿನ್ನದ ಬೆಲೆ ಈ ವಾರ 7,650 ರೂ ಹೆಚ್ಚಳ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 09, 2026 | 1:49 PM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ 225 ರೂ, ಬೆಳ್ಳಿ ಬೆಲೆ 5 ರೂ ಏರಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,740 ರೂನಿಂದ 13,965 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಆಗಸ್ಟ್ 9: ಚಿನ್ನದ ಬೆಲೆ ಸತತ ಏರಿಕೆ ಈ ವಾರದ ಕೊನೆಯವರೆಗೂ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (Gold Price) 225 ರೂ ಹೆಚ್ಚಿದೆ. ಕಳೆದ ನಾಲ್ಕೈದು ದಿನದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 765 ರೂ ಏರಿದೆ. ಅಪರಂಜಿ ಚಿನ್ನದ ಬೆಲೆ 15,000 ರೂ ಗಡಿ ದಾಟಿದೆ. ಆಭರಣ ಚಿನ್ನದ ಬೆಲೆ 14,000 ರೂ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಏರಿದೆ. ಬೆಳ್ಳಿ ಬೆಲೆಯೂ ವಾರಾಂತ್ಯದಲ್ಲಿ ಐದು ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,426 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,965 ರೂ
  • ಚೆನ್ನೈ: 13,965 ರೂ
  • ಮುಂಬೈ: 13,965 ರೂ
  • ದೆಹಲಿ: 13,980 ರೂ
  • ಕೋಲ್ಕತಾ: 13,965 ರೂ
  • ಕೇರಳ: 13,965 ರೂ
  • ಅಹ್ಮದಾಬಾದ್: 13,970 ರೂ
  • ಜೈಪುರ್: 13,980 ರೂ
  • ಲಕ್ನೋ: 13,980 ರೂ
  • ಭುವನೇಶ್ವರ್: 13,965 ರೂ

ಇದನ್ನೂ ಓದಿ: ಭಾರತದಲ್ಲಿ ಏಜ್ ವೆರಿಫಿಕೇಶನ್ ಫೀಚರ್ ಪರೀಕ್ಷಿಸುತ್ತಿರುವ ವಾಟ್ಸಾಪ್; ವಯಸ್ಸು ತಿಳಿಸಲು ಸಿದ್ದರಾಗಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,235 ರುಪಾಯಿ
  • ಮಲೇಷ್ಯಾ: 587 ರಿಂಗಿಟ್ (13,657 ರುಪಾಯಿ)
  • ದುಬೈ: 523.25 ಡಿರಾಮ್ (13,556 ರುಪಾಯಿ)
  • ಅಮೆರಿಕ: 142.50 ಡಾಲರ್ (13,560 ರುಪಾಯಿ)
  • ಸಿಂಗಾಪುರ: 189.40 ಸಿಂಗಾಪುರ್ ಡಾಲರ್ (14,098 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,679 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,686 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,731 ರುಪಾಯಿ)
  • ಕುವೇತ್: 43.57 ಕುವೇತಿ ದಿನಾರ್ (13,501 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Sun, 9 August 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್