AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ

Gold Price 9 June 2026: ಇವತ್ತು ಮಂಗಳವಾರ ಚಿನ್ನದ ಬೆಲೆ 135 ರೂನಷ್ಟು ಏರಿಕೆಯಾದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಆಭರಣ ಚಿನ್ನದ ಬೆಲೆ 13,905 ರೂನಿಂದ 14,040 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 15,316 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 260 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 270 ರೂ ಇದೆ.

Gold Rate: ಹಲವು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ; ಬೆಳ್ಳಿ ಸ್ಥಿರ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 09, 2026 | 11:09 AM

Share

ನವದೆಹಲಿ, ಜೂನ್ 9: ಹಲವು ದಿನಗಳ ನಂತರ ಚಿನ್ನದ ಬೆಲೆ (Gold Rates) ಮೊದಲ ಬಾರಿಗೆ ಹೆಚ್ಚಳಗೊಂಡಿದೆ. ನಿನ್ನೆ 95 ರೂ ಕಡಿಮೆಗೊಂಡಿದ್ದ ಇದರ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 135 ರೂ ಏರಿದೆ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆಗೊಳ್ಳದೆ ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,53,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,316 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,040 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,487 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,316 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,040 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,040 ರೂ
  • ಚೆನ್ನೈ: 14,200 ರೂ
  • ಮುಂಬೈ: 14,040 ರೂ
  • ದೆಹಲಿ: 14,055 ರೂ
  • ಕೋಲ್ಕತಾ: 14,040 ರೂ
  • ಕೇರಳ: 14,040 ರೂ
  • ಅಹ್ಮದಾಬಾದ್: 14,045 ರೂ
  • ಜೈಪುರ್: 14,055 ರೂ
  • ಲಕ್ನೋ: 14,055 ರೂ
  • ಭುವನೇಶ್ವರ್: 14,040 ರೂ

ಇದನ್ನೂ ಓದಿ: Ujjwala Yojana: ಉಜ್ವಲ ಫಲಾನುಭವಿಗಳಿಗೆ ಶಾಕ್, 9 ಅಲ್ಲ, ಇನ್ಮುಂದೆ ಸಿಗಲಿದೆ ನಾಲ್ಕೇ ನಾಲ್ಕು ಸಿಲಿಂಡರ್​ಗಳು

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 580 ರಿಂಗಿಟ್ (13,638 ರುಪಾಯಿ)
  • ದುಬೈ: 521.50 ಡಿರಾಮ್ (13,581 ರುಪಾಯಿ)
  • ಅಮೆರಿಕ: 142.50 ಡಾಲರ್ (13,629 ರುಪಾಯಿ)
  • ಸಿಂಗಾಪುರ: 190.90 ಸಿಂಗಾಪುರ್ ಡಾಲರ್ (14,184 ರುಪಾಯಿ)
  • ಕತಾರ್: 523 ಕತಾರಿ ರಿಯಾಲ್ (13,722 ರೂ)
  • ಸೌದಿ ಅರೇಬಿಯಾ: 538 ಸೌದಿ ರಿಯಾಲ್ (13,705 ರುಪಾಯಿ)
  • ಓಮನ್: 54.85 ಒಮಾನಿ ರಿಯಾಲ್ (13,626 ರುಪಾಯಿ)
  • ಕುವೇತ್: 43.89 ಕುವೇತಿ ದಿನಾರ್ (13,663 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 260 ರೂ
  • ಚೆನ್ನೈ: 270 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 270 ರೂ
  • ಅಹ್ಮದಾಬಾದ್: 260 ರೂ
  • ಜೈಪುರ್: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 270 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Tue, 9 June 26

Follow Us
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಇಂದು ಈ ರಾಶಿಯವರಿಗೆ ಅವರ ಮಾತಿನಿಂದಲೇ ಲಾಭ!
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಉತ್ತರ ಪ್ರದೇಶದಲ್ಲಿ ತರಬೇತಿ ವಿಮಾನ ಪತನ; ಮಹಿಳಾ ಪೈಲಟ್‌ಗೆ ಗಂಭೀರ ಗಾಯ
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ಬೆಂಗಳೂರಿಗರ ಬಗ್ಗೆ ಸಚಿವ ಕೃಷ್ಣಭೈರೇಗೌಡರ ಅಂತರಾಳದ ನುಡಿಗಳು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಲಗೇಜ್ ಬ್ಯಾಗ್‌ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಸಿದ್ದು ಸೈಡ್​ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!