AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 9 September: ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 9 September 2026: ಬುಧವಾರ ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಆಭರಣ ಚಿನ್ನದ ಬೆಲೆ 14,240 ರೂನಿಂದ 14,145 ರೂಗೆ ಇಳಿದಿದೆ. ಅಪರಂಜಿ ಚಿನ್ನ 15,431 ರೂ ಬೆಲೆ ಹೊಂದಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 250 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 255 ರೂ ಇದೆ.

Gold Rates 9 September: ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 09, 2026 | 2:13 PM

Share

ನವದೆಹಲಿ, ಸೆಪ್ಟೆಂಬರ್ 9: ಚಿನ್ನದ ಬೆಲೆ ಕಳೆದೆರಡು ವಾರದಿಂದ ಹೊಯ್ದಾಡುತ್ತಿದೆ. ನಿನ್ನೆ 110 ರೂ ಏರಿದ್ದ ಬಂಗಾರದ ದರ ಇವತ್ತು ಬುಧವಾರ 95 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆಯಲ್ಲಿ ಅಲ್ಪಸ್ವಲ್ಪ ವ್ಯತ್ಯಯವಾಗಿದೆ. ಸ್ಪಾಟ್ ಚಿನ್ನ ಮತ್ತು ಬೆಳ್ಳಿಯಲ್ಲೂ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,431
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,145
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,573
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,145 ರೂ
  • ಚೆನ್ನೈ: 14,145 ರೂ
  • ಮುಂಬೈ: 14,145 ರೂ
  • ದೆಹಲಿ: 14,160
  • ಕೋಲ್ಕತಾ: 14,145 ರೂ
  • ಕೇರಳ: 14,145 ರೂ
  • ಅಹ್ಮದಾಬಾದ್: 14,150 ರೂ
  • ಜೈಪುರ್: 14,160
  • ಲಕ್ನೋ: 14,160
  • ಭುವನೇಶ್ವರ್: 14,145 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 141.48 ಡಾಲರ್ (13,457 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.142 ಡಾಲರ್ (203 ರುಪಾಯಿ)

ಇದನ್ನೂ ಓದಿ: ನಾನು ಓಡಿಹೋಗಿಲ್ಲ, 14,131 ಕೋಟಿ ರೂ. ವಸೂಲಿ ಮಾಡಿದ ಮೇಲೂ ನಾನ್ಹೇಗೆ ವಂಚಕ?: ಭಾರತ ಸರ್ಕಾರದ ವಿರುದ್ಧ ವಿಜಯ್ ಮಲ್ಯ ಆಕ್ರೋಶ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,431 ರುಪಾಯಿ
  • ಮಲೇಷ್ಯಾ: 586 ರಿಂಗಿಟ್ (13,700 ರುಪಾಯಿ)
  • ದುಬೈ: 530 ಡಿರಾಮ್ (13,720 ರುಪಾಯಿ)
  • ಅಮೆರಿಕ: 145 ಡಾಲರ್ (13,787 ರುಪಾಯಿ)
  • ಸಿಂಗಾಪುರ: 189.50 ಸಿಂಗಾಪುರ್ ಡಾಲರ್ (14,257 ರುಪಾಯಿ)
  • ಕತಾರ್: 529.50 ಕತಾರಿ ರಿಯಾಲ್ (13,827 ರೂ)
  • ಸೌದಿ ಅರೇಬಿಯಾ: 545 ಸೌದಿ ರಿಯಾಲ್ (13,801 ರುಪಾಯಿ)
  • ಓಮನ್: 56.30 ಒಮಾನಿ ರಿಯಾಲ್ (13,905 ರುಪಾಯಿ)
  • ಕುವೇತ್: 43.91 ಕುವೇತಿ ದಿನಾರ್ (13,616 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 250 ರೂ
  • ಚೆನ್ನೈ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ್: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More